Featured

ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ – vishwanews24

ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ ವಿರುದ್ಧ ಇಂದು ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಕಾಲ್ನಡಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್ ಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಬ್ರಹ್ಮಗಿರಿ ಸರ್ಕಲ್ ನಲ್ಲಿ ಕೆಲಹೊತ್ತು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಮಸೂದೆಯನ್ನು ಗುರಾಣಿಯಾಗಿ ಇಟ್ಟುಕೊಂಡು ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸಲು ಎಲ್ಲ ತಯಾರಿ ನಡೆಸಿತ್ತು. ಆದರೆ ವಿರೋಧ ಪಕ್ಷಗಳು ಆ ಮಸೂದೆಯನ್ನು ಸೋಲಿಸಿವೆ. 2023 ರಲ್ಲೇ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಬಂದಿದೆ. ಆದರೆ ಅದನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿಲ್ಲ. ಈಗ ಆ ಮಸೂದೆಯನ್ನು ಮುಂದಿಟ್ಟು ಅವೈಜ್ಞಾನಿಕ ರೀತಿಯಲ್ಲಿ ಕ್ಷೇತ್ರ ಮರವಿಂಗಡನೆಗೆ ಹೊರಟಿದೆ.

ಇದನ್ನೂ ಓದಿ :

ಇದನ್ನು ಕಾಂಗ್ರೆಸ್ ಪಕ್ಷ ಸಹಿತ ಎಲ್ಲ ವಿರೋಧ ಪಕ್ಷಗಳು ವಿರೋಧಿಸುತ್ತಿವೆ. ಕೇಂದ್ರ ಸರ್ಕಾರವು ಇವತ್ತು ಮಹಿಳಾಪರ ಎಂದು ಹೇಳುತ್ತಿದೆ. ಆದರೆ ಮೊದಲ ಮಹಿಳಾ ಪ್ರಧಾನಿಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡಿದ ಹೆಗ್ಗಳಿಗೆ ಕಾಂಗ್ರೆಸ್ ಪಕ್ಷಕ್ಕಿದೆ. ಇದೀಗ ಹಿಂಭಾಗಿಲಿನ ಮೂಲಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮಸೂದೆ ಮಂಡಿಸುವ ಹಿಂದಿರುವ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು , ಪ್ರಸಾದ್ ರಾಜ್ ಕಾಂಚನ್ , ಪ್ರಖ್ಯಾತ್ ಶೆಟ್ಟಿ ,ಜ್ಯೋತಿ ಹೆಬ್ಬಾರ್ ,ಕಿಶನ್ ಹೆಗ್ಡೆ ಕೊಳ್ಕೆಬೈಲು ಹರಿಪ್ರಸಾದ್ ರೈ , ಹೆಬ್ರಿ ಮಂಜುನಾಥ್ ಪೂಜಾರಿ , ಸರ್ಫುದ್ದೀನ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ :

Vishwa News 24

Recent Posts

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – vishwanews24

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…

10 minutes ago

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು – vishwanews24

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ  ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ…

15 minutes ago

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್. ಅಶೋಕ್  – vishwanews24

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್  ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…

25 minutes ago

ಕಾಪು : ಪತಿಯ ಲಾಕರ್‌ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಪತ್ನಿ – vishwanews24

ಕಾಪು: ಪತಿಯ ಲಾಕರ್‌ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಪತ್ನಿ ಉಡುಪಿ: ನಗರದಲ್ಲಿ ವಿಚಿತ್ರ ಕಳ್ಳತನ…

2 hours ago

ಬಯಲಾಟ  ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು  : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ – vishwanews24

ಬಯಲಾಟ  ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು  : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ ರಾಯಚೂರು: ಬಯಲು…

3 hours ago

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ – vishwanews24

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ ಉಡುಪಿ: ಇಲ್ಲಿನ ಶ್ರೀ ಕೃಷ್ಣ…

3 hours ago