ಉಡುಪಿ: ಖರ್ಗೆ ಹೇಳಿಕೆ ಕಾಂಗ್ರೆಸ್‌ನ ಅಧಃಪತನಕ್ಕೆನಾಂದಿ: ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಕ್ರೋಶ – vishwanews24

Featured, ಉಡುಪಿ

ಉಡುಪಿ: ಮೋದಿ ವಿರುದ್ಧ ಖರ್ಗೆ ಹೇಳಿಕೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಖಂಡನೆ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೀಳು ಮಟ್ಟದ ಪದ ಪ್ರಯೋಗಿಸಿ ಅವಮಾನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಕ್ಷೇಪಾರ್ಹ ವರ್ತನೆ ಖಂಡನೀಯ. ಖರ್ಗೆ ಅವರ ಬೇಜವಾಬ್ದಾರಿಯುತ ನಡೆ ಕಾಂಗ್ರೆಸ್ ಪಕ್ಷದ ಅಧಃಪತನಕ್ಕೆ ನಾಂದಿ ಹಾಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದಾ ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು ‘ಮೊಹಬ್ಬತ್ ಕೀ ದುಖಾನ್’ ತೆರೆದಿದ್ದೇವೆ ಎನ್ನುತ್ತಾ ಬೇಲ್ ಮೇಲೆ ತಿರುಗಾಡುತ್ತಿರುವ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಓಲೈಸಲು ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖರ್ಗೆ ಅವರು ‘ಪ್ರಧಾನಿ ಮೋದಿ ಎಲ್ಲೂ ಹೋಗುವುದಿಲ್ಲ’ ಎಂಬ ಸಭಿಕನ ಘೋಷಣೆಗೆ ಪ್ರತಿಯಾಗಿ ಮತಿಭ್ರಮಣೆಗೊಂಡಂತೆ ವರ್ತಿಸಿ ‘ಮೋದಿ ಮಾತ್ರವಲ್ಲ, ಮೋದಿ ಅಪ್ಪನೂ ಹೋಗಲೇಬೇಕು’ ಎನ್ನುತ್ತಾ ಗೂಂಡಾ ಮಾದರಿಯ ಭಾಷೆಯನ್ನು ಬಳಸುವ ಹೀನಾಯ ಮಟ್ಟಕ್ಕೆ ಇಳಿದಿರುವುದು ಅಸಹ್ಯಕರವೆನಿಸಿದೆ.

ಬೆಳಗಾವಿ: ರಾಜಮನೆತನದ ಗೌರವ, ಸಂಪ್ರದಾಯಕ್ಕೆ ಚ್ಯುತಿ ತರುವ ಉದ್ದೇಶ ಸರ್ಕಾರಕ್ಕಿಲ್ಲ: ಡಿಕೆ ಶಿವಕುಮಾರ್ – vishwanews24

ಜಾಗತಿಕ ಮಟ್ಟದಲ್ಲಿ ಭಾರತ ಇಂದು ಅತ್ಯಂತ ಪ್ರಭಾವಶಾಲಿ ಮತ್ತು ಶಕ್ತಿಯುತ ದೇಶಗಳ ಸಾಲಿನಲ್ಲಿ ನಿಂತಿದೆ. ಬಿಜೆಪಿ ಬೆಳವಣಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ದಿನೇ ದಿನೇ ವೃದ್ಧಿಸುತ್ತಿದೆ. ಇವೆಲ್ಲವನ್ನೂ ಸಹಿಸಲಾಗದ ಖರ್ಗೆ ಮತ್ತು ಕಾಂಗ್ರೆಸ್ಸಿನ ಅಸಹಾಯಕ ಸ್ಥಿತಿ ‘ಕೈಲಾಗದವನು ಮೈ ಪರಚಿಕೊಂಡ’ ಎಂಬಂತಾಗಿದೆ. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಗೌರವಾನ್ವಿತ ಪ್ರಧಾನಿಯವರನ್ನು ಅವಮಾನಿಸಿರುವ ಖರ್ಗೆ ಅವರು ದೇಶದ ಕ್ಷಮೆ ಯಾಚಿಸಬೇಕು.

ಪ್ರಧಾನಿ ಮೋದಿ ಅವರನ್ನು ‘ಚಾಯ್‌ವಾಲಾ’ ಎಂದು ಗೇಲಿ ಮಾಡುವುದು, ‘ಸಾವಿನ ವ್ಯಾಪಾರಿ’ ಎಂದು ಜರೆಯುವುದು, ಅವರ ದಿವಂಗತ ತಂದೆ, ತಾಯಿಯವರನ್ನು ನಿಂದಿಸುವುದು ಕಾಂಗ್ರೆಸಿಗರಿಗೆ ಹವ್ಯಾಸವಾಗಿದೆ. ದೇಶದ ಜನತೆ ಕಾಂಗ್ರೆಸ್ಸಿನ ವಿಕೃತ ಮನಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 29 ರಂದು ಉಡುಪಿ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಬೃಹತ್ ರಕ್ತದಾನ ಶಿಬಿರ – vishwanews24

Leave a Reply