ಉಡುಪಿ,: ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.
ಸಂಘ ಪರಿವಾರ ಹಮ್ಮಿಕೊಂಡ ತ್ರಿಶೂಲ ದೀಕ್ಷೆಗೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯನವರೆ ಮೊದಲ ಬಲಿಯಾಗಲಿದ್ದಾರೆ ಎಂದು ರಾಜಾರೋಷವಾಗಿ ಬೆದರಿಕೆಯೊಡ್ಡಿದ ಹಿಂದೂ ಜಾಗರಣಾ ವೇದಿಕೆಯ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ವಿಫಲರಾದ ಮತ್ತು ತನ್ನದೇ ಇಲಾಖೆಯ ಕಾರ್ಯಕ್ರಮದಲ್ಲಿ ಪೊಲೀಸರು ಖಾಕಿ ಕಳಚಿ ಕೇಸರಿ ತೊಡಲು ಪ್ರಚೋದನೆ ನೀಡಿದ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ತನ್ನ ಕರ್ತವ್ಯ ಚ್ಯುತಿಯಿಂದುಂಟಾದ ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು ಹೇಳಿದೆ.
ಕರಾವಳಿ ಭಾಗದಲ್ಲಿ ಅನೈತಿಕ ಪೊಲೀಸ್ ಗಿರಿ ಅವ್ಯಾಹತವಾಗಿ ನಡೆಯುತ್ತಿದ್ದು ಗಂಡು ಹೆಣ್ಣು ಒಟ್ಟಾಗಿ ತಿರುಗಾಡದಂತಹ ಅಮಾನವೀಯ ಪರಿಸ್ಥಿತಿ ಉಂಟಾಗಿದೆ. ಮುಂದಿನ ದಿನಗಳಲ್ಲಿ ಇದು ತಾಲೀಬಾನ್ ಸಂಸ್ಕೃತಿಯಾಗಿ ರೂಪಗೊಳ್ಳದಂತೆ ತಡೆಯ ಬೇಕಾಗಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ವ್ಯಾಖ್ಯಾನಿಸಿ ಇದಕ್ಕೆ ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದೆ.
ಕೇಸರಿ ಮತ್ತು ತ್ರಿಶೂಲ ತ್ಯಾಗ ಪರಿತ್ಯಾಗ, ಶಾಂತಿ ಸೌಹಾರ್ದತೆಯ ಸಂಕೇತ. ಆದರೆ ಬಿಜೆಪಿ ಇದನ್ನು ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಸಂಘಪರಿವಾರದ ಮೂಲಕ ಸಾಮಾಜಿಕ ಭಯೋತ್ಪದನೆಗೆ ಬಳಸಿಕೊಳ್ಳುತ್ತಿದೆ. ಇದು ಹಿಂದೂ ಆಸ್ಮಿತೆಗೆ ಮಾಡಿದ ಮಹಾಮೋಸ. ಮುಂದೊಂದು ದಿನ ಸ್ವಯಂ ಬಿಜೆಪಿಯೇ ಇದಕ್ಕೆ ಬಲಿಯಾಗಿ ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…