Featured

ಉಡುಪಿ :ಖಾಸಗಿ ಬಸ್‌ಗಳು ನಿಯಮ ಪಾಲಿಸದೇ ಇದ್ದಲ್ಲಿ  ಕಾನೂನು ಕ್ರಮ ; ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ – vishwanews24

ಉಡುಪಿ :ಖಾಸಗಿ ಬಸ್‌ಗಳು ನಿಯಮ ಪಾಲಿಸದೇ ಇದ್ದಲ್ಲಿ  ಕಾನೂನು ಕ್ರಮ ; ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ

ಉಡುಪಿ : ಖಾಸಗಿ ಬಸ್‌ಗಳು ನಿಯಮಾವಳಿಗಳನ್ನು ಪಾಲನೆ ಮಾಡದಿದ್ದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.

ಫುಟ್‌ಬೋರ್ಡ್‌ಗಳಲ್ಲಿ ನೇತಾಡುವುದು, ನಿರ್ದಿಷ್ಟ ಪ್ರಮಾಣಕ್ಕಿಂತ ಅಧಿಕ ಪ್ರಯಾಣಿಕರನ್ನು ಹಾಕುವ ಬಸ್‌ಗಳನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಪರವಾನಿಗೆ ಇದ್ದೂ ರೂಟ್ ಗಳಲ್ಲಿ ಸಂಚರಿಸದಿರುವ ಖಾಸಗಿ ಬಸ್‌ಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳು ಕೇಳಿಬರುವ ಬಗ್ಗೆ ಚರ್ಚೆ ನಡೆಯಿತು.

ಕೆಎಸ್ಸಾರ್ಟಿಸಿ ಅಧಿಕಾರಿಗಳು ಮಾತನಾಡಿ, ಹೊಸ ರೂಟ್‌ಗಳಿಗೆ ಕೆಎಸ್ಸಾರ್ಟಿಸಿ ಬಸ್‌ ಹಾಕಿದರೆ, ಖಾಸಗಿ ಬಸ್ ಮಾಲಕರು ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುವ ಕಾರಣ ಸಮಸ್ಯೆ ಎದುರಾಗಿದೆ. ಸರಕಾರಿ ಬಸ್‌ಗಳನ್ನು ಹಾಕುವಂತೆ ಪ್ರಯಾಣಿಕರಿಂದ ಈಗಾಗಲೇ ಹಲವು ಮನವಿಗಳು ಬಂದಿವೆ. ಆದರೆ ಖಾಸಗಿ ಬಸ್ ಮಾಲಕರು ತಡೆಯಾಜ್ಞೆ ತರುವ ಕಾರಣ ಸಮಸ್ಯೆ ಉಂಟಾಗುತ್ತಿದೆ ಎಂದರು.

ಇದಕ್ಕೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಖಾಸಗಿ ಬಸ್‌ಗಳು ಸಾರ್ವಜನಿಕರಿಗೆ ಸೇವೆ ನೀಡುವ ನಿಟ್ಟಿನಲ್ಲಿ ಕಾರ್ಯಾಚರಿಸಬೇಕು. ಲಭ್ಯ ಇರುವ ಪರ್ಮಿಟ್ ಪ್ರಕಾರ ಬಸ್‌ಗಳು ಓಡಾಟ ಮಾಡುತ್ತಿವೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ಜನರ ಹಿತದೃಷ್ಟಿಯಿಂದ ಕೆಎಸ್ಸಾರ್ಟಿಸಿ ಬಸ್‌ಗಳನ್ನು ಹಾಕಲಾಗುವುದು. ಯಾವ ರೂಟ್ ಗಳಲ್ಲಿ ಬಸ್‌ಗಳು ಓಡಾಟ ಮಾಡುತ್ತಿಲ್ಲ ಹಾಗೂ ಎಲ್ಲಿಗೆ ಆವಶ್ಯಕತೆ ಇದೆ ಎಂಬ ಬಗ್ಗೆ ಖಾಸಗಿ ಬಸ್‌ ಮಾಲಕರು ಹಾಗೂ ಕೆಎಸ್ಸಾರ್ಟಿಸಿ ಅಧಿಕಾರಿಗಳು ವಾರದೊಳಗೆ ನಿರ್ಧರಿಸಬೇಕು.

ನ. 10ರಂದು ಈ ಬಗ್ಗೆ ಮತ್ತೊಮ್ಮೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

51 minutes ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 hour ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago