ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್ಗಳಿಗೂ ಬಾಗಿಲುಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಬಸ್ಗಳಿಗೆ ಬಾಗಿಲು ಅಳವಡಿಸಲು ನಿಗದಿತ ಸಮಯಾವಕಾಶ ಕೊಟ್ಟು, ಅಳವಡಿಸದೇ ಇರುವ ವಾಹನಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆರ್ಟಿಓ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ, ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆರ್ಟಿಓ ಅಧಿಕಾರಿಗಳಿಗೆ ಈ ಮೊದಲೇ ಸೂಚಿಸಲಾಗಿತ್ತು. ಆದರೂ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ. ಪ್ರತೀ ತಿಂಗಳು ನಿಯಮ ಉಲ್ಲಂಘಿಸಿದ ಬಸ್ಗಳ ಮೇಲೆ ಪ್ರಕರಣಗಳನ್ನು ದಾಖಲಿಸಬೇಕು ಎಂದವರು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…