Featured

ಉಡುಪಿ : ಗಂಗೊಳ್ಳಿ ಗ್ರಾ.ಪಂ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಬಿಜೆಪಿಯಿಂದ ಅಪಪ್ರಚಾರ : ಎಸ್.ಡಿ.ಪಿ.ಐ – vishwanews24

ಉಡುಪಿ : ಕೈಲಾಗದ ಶತ್ರುವಿನ ಕೊನೆಯ ಅಸ್ತ್ರ ಅಪಪ್ರಚಾರ  ..

ಬಿಜೆಪಿ ಗಂಗೊಳ್ಳಿಯ ಸೌಹಾರ್ದತೆಯನ್ನು ಕೆಡಿಸಲು ಪ್ರಯತಿಸುತ್ತಿದೆ : ಎಸ್.ಡಿ.ಪಿ.ಐ

ತನ್ನ ತಪ್ಪುಗಳಿಂದ ಪಾಠ ಕಲಿಯದ ಬಿಜೆಪಿ ತನ್ನ ಹಳೆಯ ಚಾಳಿಯನ್ನು ಮುಂದುವರೆಸಿ ಈ ಅಪಪ್ರಚಾರದಲ್ಲಿ ತೊಡಗಿದೆ : ಎಸ್.ಡಿ.ಪಿ.ಐ

ಉಡುಪಿ : ಕೈಲಾಗದ ಶತ್ರುವಿನ ಕೊನೆಯ ಅಸ್ತ್ರ ಅಪಪ್ರಚಾರ ಎಂಬ ಮಾತಿನಂತೆ ಈ ಬಾರಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲನ್ನು ಕಂಡು ಅಧಿಕಾರವನ್ನು ಕಳೆದುಕೊಂಡಿರುವ ಬಿ ಜೆ ಪಿ ಹತಾಶೆಯಿಂದ ಗಂಗೊಳ್ಳಿ ಗ್ರಾಮ ಪಂಚಾಯತಿಯಲ್ಲಿ ನಮಾಜ್ ಮಾಡಲಾಗಿದೆ ಎಂಬ ಅಪಪ್ರಚಾರದಲ್ಲಿ ತೊಡಗಿದೆ.

ಸಾಮಾನ್ಯವಾಗಿ ಚುನಾವಣೆಗಳಲ್ಲಿ ಗೆದ್ದಂತಹ ಜನಪ್ರತಿನಿಧಿಗಳು ತಮ್ಮ ಕಚೇರಿಗಳನ್ನು ಉಧ್ಘಾಟನೆ ಮಾಡುವ ಸಂದರ್ಭದಲ್ಲಿ ತಮ್ಮ ತಮ್ಮ ಧಾರ್ಮಿಕ ನಂಬಿಕೆಗಳಿಗೆ ಅನುಗುಣವಾಗಿ ಪೂಜೆ ಪುರಸ್ಕಾರಗಳನ್ನು ನಡೆಸುತ್ತಾರೆ. ಈ ಬಾರಿ ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಜಯಂತಿ ಕಾರ್ವಿ ಗಣಹೋಮ ಮಾಡುವ ಮೂಲಕ ತಮ್ಮ ಕಚೇರಿ ಉಧ್ಘಾಟಿಸಿದರೆ, ಉಪಾಧ್ಯಕ್ಷರಾಗಿ ಆಯ್ಕೆಯಾದ ತಬ್ರೇಜ್ ರವರು ದುವಾ ನೆರವೇರಿಸುವ ಮೂಲಕ ಉದ್ಘಾಟಿಸಿದ್ದರು. ಇದ್ದನ್ನೇ ಮಹಾ ಅಪರಾದವೆಂಬಂತೆ ಬಿಂಬಿಸುವ ಮೂಲಕ ಬಿಜೆಪಿ ಗಂಗೊಳ್ಳಿಯ ಸೌಹಾರ್ದತೆಯನ್ನು ಕೆಡಿಸಲು ಪ್ರಯತಿಸುತ್ತಿದೆ. ಬೈಂದೂರ್ ಶಾಸಕರಾದ ಗುರುರಾಜ್ ಘಂಟಿಹೊಳೆಯವರು ಈ ಅಪಪ್ರಚಾರಕ್ಕೆ ನೇತೃತ್ವ ನೀಡಿದ್ದು ದುರಂತವೇ ಸರಿ.

ಕಳೆದ 20 ವರ್ಷಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರ ನಡೆಸಿದ್ಧ ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕೇವಲ ಕೋಮು ಹಾಗೂ ದ್ವೇಷ ರಾಜಕಾರಣ ಮಾಡಿದ ಪರಿಣಾಮ ಈ ಬಾರಿ ಗಂಗೊಳ್ಳಿ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಯನ್ನು ಜನರು ಸೋಲಿಸಿ ಮನೆಗೆ ಕಳುಹಿಸಿದ್ದರು. ಆದರೂ ತನ್ನ ತಪ್ಪುಗಳಿಂದ ಪಾಠ ಕಲಿಯದ ಬಿಜೆಪಿ ತನ್ನ ಹಳೆಯ ಚಾಳಿಯನ್ನು ಮುಂದುವರೆಸಿ ಈ ಅಪಪ್ರಚಾರದಲ್ಲಿ ತೊಡಗಿದೆ ಇದು ಹೇಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಜನತೆ ಬೈಂದೂರ್ ಕ್ಷೇತ್ರದಿಂದಲೇ ಬಿಜೆಪಿಯನ್ನು ಮೂಲೆಗುಂಪು ಮಾಡಲಿದ್ದಾರೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ನ ನೂತನ ಉಪಾಧ್ಯಕ್ಷ ತಬ್ರೇಜ್ ಗಂಗೊಳ್ಳಿ ಯವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

22 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

22 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

22 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago