ಉಡುಪಿ: 2023 ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಬೋಟ್ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಿರುವುದಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಮೀನುಗಾರಿಕೆ ಸಚಿವರಾದ ಮಾಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ ಸಮಿತಿಯ ಸಭೆಯಲ್ಲಿ ಪ್ರಕರಣದಿಂದ ಸಮಸ್ಯೆಗೀಡಾದ ಮೀನುಗಾರರಿಗೆ ಸೂಕ್ತ ಪರಿಹಾರ ನಿಟ್ಟಿನಲ್ಲಿ ಚರ್ಚಿಸಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು.
ಗಂಗೊಳ್ಳಿ ಬೋಟ್ ಅಗ್ನಿ ಅವಘಡದಿಂದ ಬೋಟ್ ಮಾಲೀಕರು ಆರ್ಥಿಕವಾಗಿ ದೊಡ್ಡ ನಷ್ಟವನ್ನು ಎದುರಿಸಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಈ ಘಟನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರನಿಧಿಯ ಮೂಲಕ ಗರಿಷ್ಠ ಪರಿಹಾರ ಒದಗಿಸುವಂತೆ ಸಭೆಯಲ್ಲಿ ಸಚಿವರಿಗೆ ಸಮಿತಿಯ ಸದಸ್ಯರಾದ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.
ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಮನವಿಯನ್ನು ಪರಿಗಣಿಸಿ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿವಹಿಸಿದ ಮೀನುಗಾರಿಕಾ ಸಚಿವರಾದ ಮಾಂಕಾಳ ಎಸ್. ವೈದ್ಯ, ಗರಿಷ್ಠ ಪರಿಹಾರಕ್ಕೆ ಸರಕಾರವನ್ನು ಆಗ್ರಹಿಸಿದ ಸ್ಥಳೀಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…