ಉಡುಪಿ: ಅನುದಾನ ಬಿಡುಗಡೆಯಾಗಿಲ್ಲ ಎಂದು ಸುಳ್ಳು ಹೇಳಿಕೆಗಳನ್ನು ಹೇಳುತ್ತಾ, ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಯಶ್ಪಾಲ್ ಸುವರ್ಣರಿಗೆ ಶೋಭೆ ತರುವುದಿಲ್ಲ.
ಉಡುಪಿಯ ಜನತೆ ನಿಮ್ಮನ್ನ ಶಾಸಕನಾಗಿ ಆಯ್ಕೆ ಮಾಡಿದೆ. ಜನರ ಸಮಸ್ಯೆಗಳಿಗೆ ಧ್ವನಿಯಾಗುವುದರ ಜೊತೆಗೆ ಅಭಿವೃದ್ದಿಗಾಗಿ ಅನುದಾನಗಳನ್ನು ತರುವ ಕೆಲಸ ಶಾಸಕನದ್ದು, ಅನುದಾನ ತರುವಲ್ಲಿ ವಿಫಲರಾಗಿರುವ ನಿಮ್ಮ ಗಂಡಸುತನ ಎಲ್ಲಿ ಹೋಗಿದೆ ಎಂದು ಪ್ರಸಾದ್‌ರಾಜ್ ಕಾಂಚನ್ ಪ್ರಶ್ನಿಸಿದ್ದಾರೆ.
ಕೇಂದ್ರದಲ್ಲಿ ನಿಮ್ಮದೆ ಬಿಜೆಪಿ ಸರ್ಕಾರ ಇದೆ ಸಾಕಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರಸ್ತೆಗೆ ಒಮ್ಮೆ ಮುಕ್ತಿ ನೀಡಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಿ. ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆ ವೇಗದಲ್ಲಿ ನಡೆಯುತ್ತಿದೆ, ಅದಕ್ಕೆ ವೇಗ ಕೊಡುವ ಕೆಲಸ ಮಾಡಿ. ಅದು ಬಿಟ್ಟು ಸದಾ ಶಾಂತಿಯಿಂದ ಕೂಡಿದ ಉಡುಪಿಯಂತಹ ಕ್ಷೇತ್ರದಲ್ಲಿ ಶಾಂತಿ ಭಂಗದಂತಹ ಹೇಳಿಕೆಗಳನ್ನು ನೀಡುವುದು. ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರ ಬಗ್ಗೆ ಅಗೌರದ ಹೇಳಿಕೆಗಳನ್ನು ನೀಡುವುದು ಬಿಟ್ಟು, ಕ್ಷೇತ್ರದಲ್ಲಿ ಸೌಹರ್ದತೆ ಕಾಪಾಡುವ ಕೆಲಸ ಮಾಡುವುದರ ಜೊತೆ ಅನುದಾನ ತರುವ ಕೆಲಸವನ್ನು ಜವಬ್ದಾರಿಯುತವಾಗಿ ಮಾಡಿ ಎಂದು ಶಾಸಕರಿಗೆ ಕಿವಿ ಮಾತು ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…