ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಕರಾವಳಿಯ ಖ್ಯಾತ ಯೂಟ್ಯೂಬರ್ ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ 10 ಲಕ್ಷ ಸಂಗ್ರಹಿಸಿ ಕೊಟ್ಟಿದ್ದಾರೆ.
ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಯಕ್ಷಗಾನ ವೇಷವನ್ನು ಧರಿಸಿ ಒಂದೇ ದಿನದಲ್ಲಿ ಹತ್ತು ಲಕ್ಷರೂಪಾಯಿ ಸಂಗ್ರಹಿಸಿ ಬಾಲಕಿಗೆ ನೆರವು ನೀಡಿದ್ದಾರೆ.
ವೃತ್ತಿಯಲ್ಲಿ ಸಿನಿಮಾಟೋಗ್ರಾಫರ್ ಮತ್ತು ಪ್ರವೃತ್ತಿಯಲ್ಲಿ ಬೈಕ್ ರೈಡರ್, ಅಡ್ವೆಂಚರ್ಸ್ ಆಗಿರುವ ಕಾಪು ಮೂಲದ ಸಚಿನ್ ಶೆಟ್ಟಿ ಶಟರ್ ಬಾಕ್ಸ್ ಫಿಲಂಸ್ ಎಂಬ ಯೂಟ್ಯೂಬ್ ಚಾನಲ್‌ಅನ್ನೂ ಹೊಂದಿದ್ದು ಅಪಾರ ಅಭಿಮಾನಿಗಳನ್ನೂ ಹೊಂದಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿಯ ಕುಚ್ಚೂರು ಗ್ರಾಮದ ಚಂದ್ರ ನಾಯ್ಕ್ ಎಂಬುವವರ ಮಗಳಾದ ಹತ್ತು ವರ್ಷದ ಸಾನ್ವಿ ಎನ್ನುವ ಬಾಲಕಿ “ತಲಾಸೆಮಿಯಾ ಮೇಜರ್” ಎನ್ನುವ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದು “ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್” ಎನ್ನುವ ಚಿಕಿತ್ಸೆ ಮಾಡಬೇಕಿದೆ. ಈ ಚಿಕಿತ್ಸೆಗೆ 40 ಲಕ್ಷ ರೂಪಾಯಿ ಬೇಕಾಗಿದೆ. ಬಡ ಕುಟುಂಬದ ಸಾನ್ವಿ ಹೆತ್ತವರಿಗೆ ಅಷ್ಟು ದೊಡ್ಡ ಮಟ್ಟದ ಹೊಂದಿಸುವುದು ಅಸಾಧ್ಯವಾಗಿದೆ. ಮನೆಯ ಬೆಳಕಾಗಿದ್ದ ಮಗಳ ಚಿಕಿತ್ಸೆಗೆ ಹಣ ಹೊಂದಿಸುವುದರ ಬಗ್ಗೆ ಚಿಂತಾಕ್ರಾಂತರಾದ ಸಾನ್ವಿ ಹೆತ್ತವರಿಗೆ ಸಚಿನ್ ಶೆಟ್ಟಿ ಸ್ನೇಹಿತ ವರ್ಗ ಈಗ ನೆರವಾಗಿದೆ.
ಸಮಾಜಮುಖಿ ಕಾರ್ಯದಲ್ಲೂ ತೊಡಗಿಕೊಂಡಿರುವ ಸಚಿನ್ ಶೆಟ್ಟಿ ಪುಟ್ಟ ಮಗುವಿನ ಪ್ರಾಣ ಉಳಿಸಲು ಮಾಡಿದ ಕಾರ್ಯ ಈಗ ಜನರ ಮೆಚ್ಚುಗೆಯನ್ನು ಪಡೆದುಕೊಂಡಿದೆ. ಸಚಿನ್ ಶೆಟ್ಟಿ, ಸುದೀಪ್ ಶೆಟ್ಟಿ, ಚೇತನ್ ಶೆಟ್ಟಿ, ನಿತೀಶ್ ಪೂಜಾರಿ ಸೇರಿದಂತೆ ಸ್ನೇಹಿತರ ವರ್ಗ ಕೃಷ್ಣ ಜನ್ಮಾಷ್ಟಮಿಯ ದಿನದಂದು ಯಕ್ಷಗಾನ ವೇಷ ಧರಿಸಿ ಉಡುಪಿ ಪೇಟೆಯಲ್ಲಿ ಸುತ್ತಾಡಿ ಮಗುವಿಗಾಗಿ ಹಣ ಸಂಗ್ರಹ ಮಾಡಿದೆ. ಅದನ್ನು ಕಳೆದ ಏಳು ವರ್ಷಗಳಿಂದ ಪ್ರತಿ ಕೃಷ್ಣ ಜನ್ಮಾಷ್ಟಮಿಯ ಸಂರ್ಭದಲ್ಲಿ ವಿವಿಧ ವೇಷ ಧರಿಸಿ ಬಡ ಮಕ್ಕಳಿಗೆ ಸಹಾಯ ಮಾಡುತ್ತಿರುವ ರವಿ ಕಟಪಾಡಿ ಅವರ ಮೂಲಕ ಬಾಲಕಿಯ ಹೆತ್ತವರಿಗೆ ನೀಡಿದ್ದಾರೆ.
ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…