ಉಡುಪಿ: ಗಣೇಶ ಚತುರ್ಥಿಗೆ ಎರಡು ದಿನ ಇರುವಂತೆಯೇ ಹಬ್ಬದ ತಯಾರಿ ಜೋರಾಗಿ ನಡೆದಿದೆ, ಮುಖ್ಯವಾಗಿ ಉಡುಪಿಯ ಕೃಷ್ಣಮಠದ ರಥಬೀದಿಯಲ್ಲಿ ಹೂವು, ಹಣ್ಣು ಮತ್ತು ಕಬ್ಬಿನ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದ್ದು, ಹಬ್ಬದ ಆಗಮನವನ್ನು ಸಾರಿ ಹೇಳುತ್ತಿದೆ.
ಈ ಬಾರಿ ಈ ಹಿಂದಿನ ವರ್ಷಗಳಂತೆ ದೊಡ್ಡಮಟ್ಟದ ಸಂಭ್ರಮಕ್ಕೆ ಕೊರೊನಾ ಬ್ರೇಕ್ ಹಾಕಿದ್ದು ನಿಜ. ಆದರೂ ಜನರು ತಮ್ಮ ತಮ್ಮ ಮನೆಗಳಲ್ಲೇ ಗಣೇಶನ ಹಬ್ಬವನ್ನು ಆಚರಿಸಲು ಉತ್ಸುಕರಾಗಿರುವುದು ಕಂಡು ಬಂತು.
ಮಠದ ಪರಿಸರ, ರಥಬೀದಿ ಮತ್ತು ನಗರದ ಹಲವೆಡೆಗಳಲ್ಲಿ ದೂರದೂರುಗಳ ಕೃಷಿಕರು ಕಬ್ಬುಗಳನ್ನು ತಂದು ಮಾರಾಟ ಮಾಡುತ್ತಿದ್ದಾರೆ. ಲಾಕ್ ಡೌನ್ ಬಹುತೇಕ ತೆರವುಗೊಳ್ಳುತ್ತಿರುವುದರಿಂದ ನಗರದಲ್ಲಿ ಜನಸಂದಣಿ ಕೂಡ ಹೆಚ್ಚುತ್ತಿದ್ದು, ಕೊರೊನಾ ಬರುವ ಮುಂಚಿನಂತೆ ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ.
ಒಟ್ಟಾರೆ ಕೋವಿಡ್ ನಿಯಮಾವಳಿ ಮಧ್ಯೆಯೂ ಜನರು ಹಬ್ಬಕ್ಕೆ ಬೇಕಾದ ಹೂವು ಹಣ್ಣು, ಕಬ್ಬು ಮತ್ತಿತರ ವಸ್ತುಗಳನ್ನು ಆಸಕ್ತಿಯಿಂದ ಖರೀದಿಸುವ ದೃಶ್ಯ ಕಂಡು ಬಂತು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…