ಉಡುಪಿ: ಗಣೇಶ ಹಬ್ಬದ ಪ್ರಯುಕ್ತ ಆ. 27ರಿಂದ ಜಿಲ್ಲೆಯಾದ್ಯಂತ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಉಪ-ವಿಭಾಗದಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯಲಿದೆ. ಈ ಪ್ರಯುಕ್ತ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭದಲ್ಲಿ ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಅವರು, ಆ.27ರಂದು ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ಆ.29 ಮತ್ತು ಅ. 31 ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…