Featured

ಉಡುಪಿ: ಗರುಡಾ ಗ್ಯಾಂಗಿನ ಕಬೀರ್ ಹುಸೇನ್ ಜೈಲಿಗೆ ; ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಎತ್ತಿಹಿಡಿದ ಹೈಕೋರ್ಟ್ – vishwanews24

ಉಡುಪಿ: ಗರುಡಾ ಗ್ಯಾಂಗಿನ ಕಬೀರ್ ಹುಸೇನ್ ಜೈಲಿಗೆ ; ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಎತ್ತಿಹಿಡಿದ ಹೈಕೋರ್ಟ್

ಉಡುಪಿ: ಗರುಡ ಗ್ಯಾಂಗ್‌ನ ಸಕ್ರಿಯ ಸದಸ್ಯ ಹಾಗೂ ಉಡುಪಿ ಜಿಲ್ಲೆಯಲ್ಲದೇ ನೆರೆಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ತನ್ನ ಅಪರಾಧಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಬೀರ್‌ ಅಲಿಯಾಸ್ ಕಬೀರ್‌ ಹುಸೇನ್‌ (46) ನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿರುವ ನಡೆಯನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿದೆ.

ಕಾರ್ಕಳ ನಗರ ಠಾಣಾ ಉಪನಿರೀಕ್ಷಕರು ಜಿಲ್ಲಾ ಎಸ್ಪಿಯವರಿಗೆ ಸಲ್ಲಿಸಿದ ವರದಿಯನ್ನು, ಎಸ್ಪಿಯವರಯ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದ್ದಾರೆ. ಪರಿಶೀಲಿಸಿದ ಅವರು 2025 ರ ಜು.10 ರಂದು ಬಂಧನ ಆದೇಶ ಹೊರಡಿಸಿದ್ದರು. ಕಾರ್ಕಳ ಪೋಲಿಸರು ಅಂದೇ ಆತನನ್ನು ಬಂಧಿಸಿ ಮೈಸೂರಿನ ಕೇಂದ್ರ ಕಾರಗೃಹಕ್ಕೆ ವರ್ಗಾಯಿಸಿದ್ದರು.

ಪೋಲಿಸರ ಈ ನಡೆಯನ್ನು 2025 ಆ.4 ರಂದು ಹೈಕೋರ್ಟ್‌ನ ಪೀಠದಲ್ಲಿ ಬಂಧನ ಆದೇಶದ ಬಗ್ಗೆ ಆರೋಪಿಯೂ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆದು, ನ್ಯಾಯಾಲಯವು ಜಿಲ್ಲಾಧಿಕಾರಿಯವರ ಆದೇಶವನ್ನು ಎತ್ತಿ ಹಿಡಿದು, ಮೇಲ್ಮನವಿಯನ್ನು ತಿರಸ್ಕರಿಸಿದೆ. ಬಂಧಿತ ಆರೋಪಿಗೆ 2025 ರ ಜು.10 ರ 1 ವರ್ಷದವರೆಗೆ ಬಂಧನ ಆದೇಶವನ್ನು ಮಾನ್ಯ ಮಾಡಿದೆ.

ಬಂಧಿತ ಆರೋಪಿಯ ವಿರುದ್ಧ 2005 ರಿಂದ ಇಲ್ಲಿಯವರೆಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 02 ಪ್ರಕರಣಗಳಲ್ಲಿ ಸಜೆಯಾಗಿದೆ. 08 ಪ್ರಕರಣಗಳಲ್ಲಿ ಸಾಕ್ಷಿದಾರರು ಪ್ರತಿಕೂಲ ಸಾಕ್ಷಿ ನುಡಿದದ್ದರಿಂದ ಖುಲಾಸೆಯಾಗಿದ್ದು, 03 ಪ್ರಕರಣಗಳು ರಾಜಿಯಲ್ಲಿ ಮುಕ್ತಾಯವಾಗಿದೆ. 02 ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿದ್ದು, ಇನ್ನುಳಿದ 02 ಪ್ರಕರಣಗಳು ತನಿಖೆಯಲ್ಲಿವೆ. ಸಜೆಯಾದ ಪ್ರಕರಣಗಳ ಪೈಕಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಠಾಣೆಯಲ್ಲಿ 2012ನೇ ಸಾಲಿನಲ್ಲಿ ವರದಿಯಾದ ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯ ಜೊತೆಗೆ ₹ 50,000 ದಂಡ ವಿಧಿಸಿತ್ತು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago