Featured

ಉಡುಪಿ : ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧ: ಡಾ. ಪ್ರತಾಪ್ ಕುಮಾರ್ -Vishwanews24

ಉಡುಪಿ : ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧ: ಡಾ. ಪ್ರತಾಪ್ ಕುಮಾರ್ -Vishwanews24

ಉಡುಪಿ : ಗರ್ಭಪೂರ್ವ ಮತ್ತು ಪ್ರಸವ ಪೂರ್ವಭ್ರೂಣ ಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಕಾನೂನಿನ ಅಡಿಯಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಸೂತಿ ತಜ್ಞ ಹಾಗೂ ಜಿಲ್ಲಾ ಪಿಸಿ & ಪಿಎನ್‌ಡಿಟಿ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದರು.

ಅವರು ಇಂದು ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸಾವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದಲ್ಲಿ ಪುರುಷ ಮತ್ತು ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಸರಕಾರ ಕಾನೂನನ್ನು ಜಾರಿಗೆ ತಂದಿದೆ. ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದ್ದು, ಇದನ್ನು ಉಲ್ಲಂಘಿಸುವವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ 1000 ಜನ ಪುರುಷರಿಗೆ, 957 ಜನ ಹೆಣ್ಣು ಮಕ್ಕಳಿದ್ದಾರೆ ಎಂದ ಅವರು ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅಸಮತೋಲನ ಉಂಟಾಗದoತೆ ನೋಡಿಕೊಳ್ಳುವುದು ಈ ಸಮಿತಿಯ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳು ಜಿಲ್ಲಾ ಸಕ್ಷಮ ಪ್ರಾಧಿಕಾರದಿಂದ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು, ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಸರ್ಕಾರದ ನಿಯಮಾನುಸಾರ ರಿಜಿಸ್ಟರ್ ಮತ್ತು ಮತ್ತಿತರ ದಾಖಲೆಗಳಲ್ಲಿ ನೋಂದಾಯಿಸಬೇಕು ಎಂದರು.

ಭ್ರೂಣಲಿಂಗ ಪತ್ತೆಯಿಂದ ಸಮಾಜದಲ್ಲಿ ಆಗುವ ತೊಂದರೆಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡುವುದರೊಂದಿಗೆ ಗಂಡು ಮತ್ತು ಹೆಣ್ಣಿನ ಅನುಪಾತವನ್ನು ಸಮಾನವಾಗಿರುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್ ಕೆ ಮಾತನಾಡಿ, 18 ವರ್ಷದೊಳಗಿನ ಮಹಿಳೆಯರು ಸ್ಕ್ಯಾನಿಂಗ್ ಮಾಡಿಸಲು ಸ್ಕ್ಯಾನಿಂಗ್ ಕೇಂದ್ರಗಳಿಗೆ ಬಂದಾಗ ಅವರನ್ನು ಸಮೀಪದ ಸರಕಾರಿ ಆಸ್ಪತ್ರೆಗಳಿಗೆ ಹೋಗುವಂತೆ ತಿಳಿಸಬೇಕು. ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳು ವೈದ್ಯರ ಶಿಫಾರಸು ಪತ್ರದ ಆಧಾರದ ಮೇಲೆ ಸ್ಕ್ಯಾನಿಂಗ್ ಕಾರ್ಯವನ್ನು ಕೈಗೊಳ್ಳಬೇಕು. ಸ್ಕ್ಯಾನಿಂಗ್ ನ ಶುಲ್ಕದ ವಿವರವನ್ನು ಸ್ಕ್ಯಾನಿಂಗ್ ಕೇಂದ್ರದ ಮುಂಭಾಗ ಪ್ರದರ್ಶಿಸಬೇಕು ಎಂದರು.

ಸ್ಕ್ಯಾನಿಂಗ್ ನ ಮಾಲೀಕರು ನಿಗದಿತ ಕಾಲಾವಧಿಯ ಒಳಗೆ ನವೀಕರಣ ಮಾಡಿಸಬೇಕು ಎಂದ ಅವರು ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಬಳಕೆ ಮಾಡದೇ ಇರುವ ಹಳೆಯ ಸ್ಕ್ಯಾನಿಂಗ್ ಯಂತ್ರಗಳು ದುರ್ಬಳಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಅವುಗಳನ್ನು ಸರ್ಕಾರದ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಮಕ್ಕಳ ತಜ್ಞ ಕಿರಣ್ ಹೆಬ್ಬಾರ್, ಡಾ. ಆಮ್ನಾ ಹೆಗ್ಡೆ, ಡಾ. ದೀಕ್ಷಿತ್, ಡಾ. ಅನಿತಾ ಪ್ರಭು, ಸಮಾಜ ಸೇವಕರುಗಳಾದ ಡಾ. ಗಣೇಶ್ ಪೈ ಮತ್ತು ಸರೀತಾ ಸಂತೋಷ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago