Featured

ಉಡುಪಿ : ಗಾಂಧೀಜಿ ಅಶಯದ ಸ್ವಚ್ಛ ಭಾರತ ಕಲ್ಪನೆ ಸಾಕಾರಗೊಂಡಿದೆ : ರಘುಪತಿ ಭಟ್ -Vishwanews24

ಉಡುಪಿ : ಗಾಂಧೀಜಿ ಅಶಯದ ಸ್ವಚ್ಛ ಭಾರತ ಕಲ್ಪನೆ ಸಾಕಾರಗೊಂಡಿದೆ : ರಘುಪತಿ ಭಟ್ -Vishwanews24

ಉಡುಪಿ, :  ಮಹಾತ್ಮಗಾಂಧೀಜಿ ಅವರ ತತ್ವ ಮತ್ತು ಚಿಂತನೆಗಳಲ್ಲಿ ಸ್ವಚ್ಛತೆಯೂ ಒಂದಾಗಿದ್ದು, ಅವರ ಆಶಯದಂತೆ ದೇಶದಾದ್ಯಂತ ಪ್ರತಿಯೊಬ್ಬ ಭಾರತೀಯನ ಚಿಂತನೆ ಸ್ವಚ್ಛ ಭಾರತ ಕಡೆಗೆ ತಿರುಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಅವರು ಇಂದು ಅಜ್ಜರಕಾಡು ಭುಜಂಗಪಾರ್ಕ್ನಲ್ಲಿ ನಗರಸಭೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ , ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿ ಅವರ ಚಿಂತನೆಯ0ತೆ ಸ್ವಚ್ಛತೆ ಸುತ್ತಮುತ್ತಲಿನ ಪರಿಸರದಲ್ಲಿ ಮಾತ್ರವಲ್ಲದೇ ಪ್ರತಿಯೊಬ್ಬರ ಮನದಲ್ಲೂ ಮೂಡಬೇಕು ,ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಗಾಂಧೀಜಿ ಅವರ 150 ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ನೀಡಿದ ಕರೆಯಂತೆ ದೇಶದಾದ್ಯಂತ ಸ್ವಚ್ಛತಾ ಅಭಿಯಾನ ಆರಂಭಗೊ0ಡಿದೆ. ಉಡುಪಿಯನ್ನು ಸ್ವಚ್ಛ ಉಡುಪಿ ಮಾಡಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಿದೆ ಎಂದರು.

ಸ್ವಚ್ಛ ಭಾರತ್ ಮಿಷನ್-ನಗರ ಮತ್ತು ಅಮೃತ್ 2 ನೇ ಹಂತದ ಯೋಜನೆಯಂತೆ, ರಾಷ್ಟ್ರಾದಾದ್ಯಂತ ಇರುವ ಕಸದ ಗುಡ್ಡೆಗಳನ್ನು ಸಮರ್ಪಕ ರೀತಿಯಲ್ಲಿ ತೆರವುಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದ್ದು, ಈ ಯೋಜನೆಯಡಿ ಉಡುಪಿಯ ಕರ್ವಾಲ್ ನಲ್ಲಿರುವ ಕಸದ ಗುಡ್ಡೆಯನ್ನು ಸೂಕ್ತ ರೀತಿಯಲ್ಲಿ ತೆರವು ಮಾಡಬೇಕಿದೆ. ಮತ್ತು ತ್ಯಾಜ್ಯದಿಂದ ನದಿ ನೀರು ಕಲುಷಿತಗೊಳ್ಳುವುದನ್ನು ತಡೆಯಲೂ ಸಹ ಕೇಂದ್ರ ನೆರವು ನೀಡಲಿದ್ದು, ಇದರಡಿಯಲ್ಲಿ ಉಡುಪಿಯಲ್ಲಿ ಒಳಚರಂಡಿ ವ್ಯವಸ್ಥೆಯಿಂದ ಕಲುಷಿತಗೊಂಡಿರುವ ಸ್ವರ್ಣಾ ನದಿಯನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕಿದೆ.
ಈಗಾಗಲೇ ಉಡುಪಿಯ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕಗೊಳಿಸಲು 320 ಕೋಟಿ ರೂ ಗಳ ಡಿಪಿಆರ್ ಸಲ್ಲಿಕೆಯಾಗಿದ್ದು, ಮಂಡಳಿಯಲ್ಲಿ ಮಂಜೂರಾತಿ ಕೂಡಾ ದೊರೆತಿದೆ. ನಗರಸಭೆ ವತಿಯಿಂದ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ,ನಗರವನ್ನು ಇನ್ನಷ್ಟು ಸ್ವಚ್ಛತೆಯಿಂದ ಕೂಡಿರುವಂತೆ ಮಾಡಲಾಗುವುದು ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಮಹಾತ್ಮ ಗಾಂಧೀ ಅವರ ಜಯಂತಿ ಜೊತೆಯಲ್ಲಿ ಇಂದು ಲಾಲ್ ಬಹದ್ದೂರ್ ಶಾಸ್ತಿç ಅವರ ಜಯಂತಿ ಕೂಡಾ ಆಚರಿಸಲಾಗುತ್ತಿದೆ. ಈ ಇಬ್ಬರೂ ಮಹಾನ್ ವ್ಯಕ್ತಿಗಳ ಸರಳ ಜೀವನ ಮಾದರಿಯಾದುದು, ಗಾಂಧೀಜಿ ಅವರು ನನ್ನ ಜೀವನವೇ ಸಂದೇಶ ಎಂದಿದ್ದರು, ಶಾಂತಿ ಮತ್ತು ಅಹಿಂಸೆಯಿ0ದ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮಾ ಗಾಂಧೀಜಿ ಅವರ ಜಯಂತಿಯನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಮಂಗಳೂರು :ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಗಾಂಧಿ ಜಯಂತಿಗೆ ಚಾಲನೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಗಾಂಧೀ ಜಯಂತಿಯ ಅಂಗವಾಗಿ ಅಕ್ಟೋಬರ್ 1 ರಿಂದ 31 ರ ವರೆಗೆ ಕ್ಲೀನ್ ಇಂಡಿಯಾ ಕಾರ್ಯಕ್ರಮ ನಡೆಯುತ್ತಿದ್ದು, ಜಿಲ್ಲೆಯ ಪ್ರತೀ ಮನೆಗಳಲ್ಲಿರುವ ಅನುಪಯುಕ್ತ ಪ್ಲಾಸ್ಟಿಕ್ ನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತ ಉಡುಪಿ ಜಿಲ್ಲೆಯನ್ನಾಗಿ ಮಾಡುವ ಆಭಿಯಾನ ನಡೆಯುತ್ತಿದ್ದು , ಸಾರ್ವಜನಿಕರು ಈ ಕಾರ್ಯಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದರ ಮೂಲಕ ಉಡುಪಿ ಜಿಲ್ಲೆಯನ್ನು ಸ್ವಚ್ಛ ಜಿಲ್ಲೆಯನ್ನಾಗಿ
ಮಾಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್,ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು.

ಪೌರಾಯುಕ್ತ ಉದಯ ಶೆಟ್ಟಿ ಸ್ವಾಗತಿಸಿದರು. ನಗರಸಭೆ ಎಂಜಿನಿಯರ್ ಮೋಹನ್ ರಾಜ್ ವಂದಿಸಿದರು,ಧನAಜಯ
ನಿರೂಪಿಸಿದರು. ಕಾರ್ಯಕ್ರಮದ ನಂತರ , ಸ್ವಾತಂತ್ರ್ಯ ದ ಅಮೃತ ಮಹೋತ್ಸವದ ಅಂಗವಾಗಿ ಕ್ಲೀನ್ ಇಂಡಿಯಾ ಕಾರ್ಯಕ್ರಮಕ್ಕೆ
ಚಾಲನೆ ನೀಡಿ, ರಸ್ತೆ ಬದಿಯಲ್ಲಿ ಬಿದ್ದಿದ್ದ ಅನುಪಯುಕ್ತ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿ,ವಿಲೇವಾರಿ
ಮಾಡಲಾಯಿತು..

 

ಸಾರಿಗೆ ಉದ್ಯಮಿ ಪಾಂಗಳ ರಬೀಂದ್ರ ನಾಯಕ್ ನಿಧನ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago