ಉಡುಪಿ : ಗುಡುಗು ಸಹಿತ ಭಾರೀ ಮಳೆ – ಜಿಲ್ಲಾದ್ಯಂತ ನಾಳೆ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ – vishwanews24

Featured, ಉಡುಪಿ

ಉಡುಪಿ : ಗುಡುಗು ಸಹಿತ ಭಾರೀ ಮಳೆ – ಜಿಲ್ಲಾದ್ಯಂತ ನಾಳೆ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ

ಉಡುಪಿ : ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲಾದ್ಯಂತ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಎರಡು ದಿನಗಳಲ್ಲಿ, ಜುಲೈ 6 ಮತ್ತು 7, ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ

Leave a Reply