Featured

ಉಡುಪಿ : ಗೃಹೋಪಯೋಗಿ ಮಳಿಗೆಯ ಮ್ಯಾನೇಜರ್‌ಗೆ ಚೂರಿ ಇರಿತ ಪ್ರಕರಣ: ಸೆಕ್ಯುರಿಟಿ ಗಾರ್ಡ್ ಬಂಧನ – vishwanews24

ಉಡುಪಿ : ಗೃಹೋಪಯೋಗಿ ಮಳಿಗೆಯ ಮ್ಯಾನೇಜರ್‌ಗೆ ಚೂರಿ ಇರಿತ ಪ್ರಕರಣ: ಸೆಕ್ಯುರಿಟಿ ಗಾರ್ಡ್ ಬಂಧನ

ಉಡುಪಿ : ನಗರದ ಗೃಹೋಪಯೋಗಿ ಮಳಿಗೆಯೊಂದರ ಮ್ಯಾನೇಜರ್‌ಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೆಕ್ಯುರಿಟಿ ಗಾರ್ಡ್‌ನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಗೃಹೋಪಯೋಗಿ ಮಳಿಗೆಯ ಸೆಕ್ಯೂರಿಟಿ ಗಾರ್ಡ್, ಪ್ರಸಾದ್ ಬಂಧಿತ ಆರೋಪಿ. ಚೂರಿ ಇರಿತದಿಂದ ತೀವ್ರವಾಗಿ ಗಾಯಗೊಂಡ ಹರ್ಷ ಮಳಿಗೆಯ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ ಡಿಸೋಜ(36) ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆ.9ರಂದು ಕೆಲಸಕ್ಕೆ ಬಂದಿದ್ದ ಪ್ರಸಾದ್, ಮಧ್ಯಾಹ್ನದವರೆಗೆ ಮಾತ್ರ ಕೆಲಸ ಮಾಡಿ ಹೋಗಿದ್ದನು. ಈ ಕುರಿತು ಆತನ ಸೆಕ್ಯೂಟಿರಿ ಗಾರ್ಡ್ ಕಂಪನಿಯ ಮ್ಯಾನೇಜರ್‌ಗೆ ತಿಳಿಸಲಾಗಿತ್ತು. ಆ.10ರಂದು ಪ್ರಸಾದ್ ಕೆಲಸಕ್ಕೆ ಹಾಜರಿದ್ದು, ಸಂಜೆ ವೇಳೆ ರೋನ್ಸನ್ ಡಿಸೋಜ ಅವರನ್ನು ಪ್ರಸಾದ್ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಶೋರೂಂಗೆ ಬರಲು ತಿಳಿಸಿದ್ದನು. ಅದರಂತೆ ಬಂದ ರೋನ್ಸನ್ ಅವರಲ್ಲಿ ನನ್ನನ್ನು ಕೆಲಸದಿಂದ ತೆಗೆಯಬೇಡಿ ಎಂದು ಪ್ರಸಾದ್ ಹೇಳಿದನು. ಅದಕ್ಕೆ ಮರುದಿನ ಅಧಿಕಾರಿಗಳೊಂದಿಗೆ ಮೀಟಿಂಗ್‌ನಲ್ಲಿ ಚರ್ಚಿಸಿ ತಿಳಿಸುತ್ತೇನೆ ಎಂದು ಹೇಳಿದ್ದರು.

ಇದರಿಂದ ಸಿಟ್ಟುಕೊಂಡ ಪ್ರಸಾದ್, ಅವಾಚ್ಯ ಶಬ್ಧಗಳಿಂದ ಬೈದಿದ್ದು, ಕಟ್ಟಡದ ಗ್ರೌಂಡ್ ಪ್ಲೋರ್‌ನಲ್ಲಿ ರೋನ್ಸನ್ ಡಿಸೋಜರನ್ನು ಅಡ್ಡಗಟ್ಟಿ ಚೂರಿಯಿಂದ ಕುತ್ತಿಗೆ, ಎದೆಗೆ ಚುಚ್ಚಿ, ಕಾಲಿನಿಂದ ಒದ್ದು, ಬೆದರಿಕೆ ಹಾಕಿ ಪರಾರಿಯಾಗಿದ್ದನು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

10 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

10 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

10 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

13 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

14 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

14 hours ago