ಉಡುಪಿ : ರಾಜ್ಯದಲ್ಲಿ ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಲಾಕ್‌ಡೌನ್ ಪರಿಣಾಮವಾಗಿ ಸಂಕಷ್ಟಕ್ಕೊಳಗಾದ 11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2,000 ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ ಮೂಲಕ ಜುಲೈ 31 ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಈ ಹಿಂದಿನ ಮಾರ್ಗಸೂಚಿಯಲ್ಲಿ ನೆರವಿನ ಮೊತ್ತನ್ನು ಪಡೆಯಲು ನಿಗದಿಪಡಿಸಿದ ಅಧಿಕಾರಿಗಳಿಂದ ಅಥವಾ ಪತ್ರಾಂಖಿತ ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪತ್ರವನ್ನು ಸಲ್ಲಿಸಲು ತಿಳಿಸಲಾಗಿರುತ್ತದೆ.
ಆದರೆ ಜುಲೈ 1 ರಂದು ಉಚ್ಛ ನ್ಯಾಯಾಲಯದಲ್ಲಿ ನಡೆದ ನಡವಳಿಯಲ್ಲಿ ಗೃಹ ಕಾರ್ಮಿಕರಿಗೆ ಸಂಬoಧಿಸಿದoತೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ಉದ್ಯೋಗ ದೃಡೀಕರಣ ಪತ್ರದಲ್ಲಿ ಗೃಹ ಕಾರ್ಮಿಕರು ವೃತ್ತಿ ನಿರ್ವಹಿಸುತ್ತಿರುವ ಮಾಲೀಕರಿಂದ ಸಹಿ ಪಡೆಯಲು ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ಗೃಹ ಕಾರ್ಮಿಕರು ನಿಗದಿಪಡಿಸಿದ ಅಧಿಕಾರಿಗಳಿಂದ ಅಥವಾ ಅವರು ಕಾರ್ಯನಿರ್ವಹಿಸುತ್ತಿರುವ ಮಾಲೀಕರಿಂದ ಸಹಿ ಮಾಡಿಸಿ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಇದಕ್ಕೆ ಪ್ರತ್ಯೇಕ ನಮೂನೆಯ ಉದ್ಯೋಗ ದೃಢೀಕರಣ ಪ್ರಮಾಣ ಪತ್ರವನ್ನು ಹೊರಡಿಸಿದ್ದು, ಮೊಬೈಲ್ ಸಂಖ್ಯೆ ನಮೂದಿಸುವುದು ಐಚ್ಛಿಕಗೊಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ ಸಂಖ್ಯೆ: 155214 ಅನ್ನು ಸಂಪರ್ಕಿಸುವoತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…