ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳು ಈ ಆದೇಶದ ಅನುಷ್ಠಾನದ ಭಾಗವಾಗಿ ಜುಲೈ 1ರಿಂದ ಗೃಹ ಜ್ಯೋತಿ ಫಲಾನುಭವಿಗಳ ಮನೆಗಳ ಮರುಪರಿಶೀಲನೆ ಪ್ರಕ್ರಿಯೆಯನ್ನು ಆರಂಭಿಸಿವೆ. ಈ ಪ್ರಕ್ರಿಯೆ ಆಗಸ್ಟ್ 31ರವರೆಗೆ ನಡೆಯಲಿದೆ.
ಈಗಾಗಲೇ ಉಡುಪಿ ತಾಲೂಕಿನಲ್ಲಿ ಮರುಪರಿಶೀಲನೆ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಗೃಹ ಜ್ಯೋತಿ ಫಲಾನುಭವಿಗಳು ಕೂಡಲೇ ಮರುಪರಿಶೀಲನೆಗೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು, ಹತ್ತಿರದ ಮೆಸ್ಕಾಂ ಕಚೇರಿಯನ್ನು ಸಂಪರ್ಕಿಸಿ ಮರುಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…