Featured

ಉಡುಪಿ: ಗೋವಾ ಸಿಎಂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವಾಗ ಮಾಂಸಾಹಾರ ಸೇವನೆ ಮಾಡಿರಲಿಲ್ಲ : ಶಾಸಕ ಕೆ ರಘುಪತಿ ಭಟ್ ಸ್ಪಷ್ಟನೆ – Vishwanews24

ಉಡುಪಿ: ಗೋವಾ ಸಿಎಂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವಾಗ ಮಾಂಸಾಹಾರ ಸೇವನೆ ಮಾಡಿರಲಿಲ್ಲ : ಶಾಸಕ ಕೆ ರಘುಪತಿ ಭಟ್ ಸ್ಪಷ್ಟನೆ

ಉಡುಪಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವಾಗ ಮಾಂಸಾಹಾರ ಸೇವನೆ ಮಾಡಿರಲಿಲ್ಲ ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಮೋದ್ ಸಾವಂತ್ ಮಧ್ಯಾಹ್ನ ಊಟ ಮಾಡುವಾಗ ನಾನು ಜೊತೆಯಲ್ಲಿದ್ದೆ. ಸಾವಂತ್ ಊಟಕ್ಕೆ ಯಾವುದೇ ಮಾಂಸಹಾರ ಸೇವಿಸಿಲ್ಲ. ಆದರೆ ಸಿಎಂ ಜೊತೆಗೆ ಬಂದಿದ್ದ ಸಿಬ್ಬಂದಿಗಳಿಗೆ ಮಾಂಸಾಹಾರ ಊಟದ ವ್ಯವಸ್ಥೆ ಇತ್ತು ಎಂದರು.

ಗೋವಾ ಸಿಎಂ ಸಾವಂತ್ ಮಾಂಸಹಾರ ಸೇವಿಸಿ ಮಠಕ್ಕೆ ಹೋಗಿದ್ದಾರೆ ಎಂದು ಆರೋಪಿಸುವವರ ಬಳಿ ಏನು ಸಾಕ್ಷ್ಯ ಇದೆಯೋ ನನಗೆ ಗೊತ್ತಿಲ್ಲ. ಅವರು ಹೋಟೇಲಿನ ಮೆನು ನೋಡಿ ಹೇಳಿದ್ದಾರೇನೋ ಗೊತ್ತಿಲ್ಲ. ಸಿಎಂ ಜೊತೆ 40 – 50 ಅಧಿಕಾರಿಗಳು ಬಂದಿದ್ದರು. ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮೀನನ್ನು ಆರ್ಡರ್ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಉಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ.. ಕಾರ್-ಟ್ಯಾಕ್ಸಿಗಳಿಗೆ ಅನುಮತಿ :ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ – Vishwanews24

ಚುನಾವಣೆ ಹತ್ತಿರ ಬಂದಿರುವುದರಿಂದ ಈ ಆರೋಪ ಬಂದಿದೆ. ಸಿದ್ದರಾಮಯ್ಯ ನಾನ್ ವೆಜ್ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಫೋಟೊ ಸಮೇತ ಸಾಕ್ಷಿ ಇಟ್ಟು ಬಿಜೆಪಿ ಮಾತನಾಡಿತ್ತು. ಸಿದ್ದರಾಮಯ್ಯ ನಾನು ತಪ್ಪಿ ಹೋದೆ, ನೆನಪಿಲ್ಲ ಎಂದಿದ್ದರೆ ದೊಡ್ಡ ಸುದ್ದಿಯಾಗುತ್ತಿರಲಿಲ್ಲ. ಆದರೆ ಅವರು ನಾನು ದನದ ಮಾಂಸ ತಿಂದು ಹೋಗುತ್ತೇನೆ, ಏನಾಗುತ್ತದೆ ಎಂದು ದರ್ಪದಿಂದ ಮಾತನಾಡಿದ್ದರು. ಕಾಂಗ್ರೆಸ್ ನವರು ಫೋಟೊ, ವೀಡಿಯೊ ನೀಡಿ ಮಾತನಾಡಲಿ ಎಂದು ರಘುಪತಿ ಭಟ್ ಸವಾಲು ಹಾಕಿದರು.

ಭಾನುವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಉಡುಪಿಗೆ ಬಂದಿದ್ದ ಗೋವಾ ಸಿಎಂ ಮಾಂಸಾಹಾರ ತಿಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯನ್ಬು ಭೇಟಿ ಮಾಡಿ ಪ್ರಸಾದ ಕೂಡಾ ಸೇವಿಸಿದ್ದಾರೆ. ಮಾಂಸಹಾರ ಸೇವಿಸಿ ಮಠಕ್ಕೆ ಭೇಟಿ ಕೊಡಬಹುದೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದರು.

ಇದನ್ನೂ ಓದಿ: ಮಂಗಳೂರು: ಶಾರದೋತ್ಸವದ ಬ್ಯಾನರ್ ಹರಿದ ಪ್ರಕರಣ : ಮೂವರು ಪೊಲೀಸ್ ವಶಕ್ಕೆ – Vishwanews24

ಉಡುಪಿಯ ಶಾಸಕರೂ ಜೊತೆಗಿದ್ದರು‌ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಿಗೆ ಇದು ಸರಿಕಾಣುತ್ತದಾ ಎಂದು ರಮೆಶ್ ಕಾಂಚನ್ ಪ್ರಶ್ನಿಸಿದ್ದರು. ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಇಂದು ಉತ್ತರಿಸಿದ ಶಾಸಕ ರಘುಪತಿ ಭಟ್ ಗೋವಾ ಸಿಎಂ ಮಾಂಸಾಹಾರ ಮಾಡಿರಲಿಲ್ಲ. ಕೇವಲ ಸಿಬ್ಬಂದಿಗಳು ಮಾಡಿದ್ದರು ಎಂದು ಉತ್ತರಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

3 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

4 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

4 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

5 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

5 hours ago