Featured

ಉಡುಪಿ: ಗೋವಿನ ರುಂಡ ಪತ್ತೆ ಪ್ರಕರಣ : ದುಷ್ಕರ್ಮಿಗಳನ್ನು 24 ಗಂಟೆಯೊಳಗೆ ಬಂಧಿಸುವಂತೆ ಯಶ್ಪಾಲ್ ಆಗ್ರಹ – vishwanews24

ಉಡುಪಿ: ಗೋವಿನ ರುಂಡ ಪತ್ತೆ ಪ್ರಕರಣ : ದುಷ್ಕರ್ಮಿಗಳನ್ನು 24 ಗಂಟೆಯೊಳಗೆ ಬಂಧಿಸುವಂತೆ ಯಶ್ಪಾಲ್ ಆಗ್ರಹ

ಉಡುಪಿ: ಬ್ರಹ್ಮಾವರ ಕುಂಜಾಲು ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ಕುಂಜಾಲು ರಾಮ ಮಂದಿರದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಭೆ ನಡೆಸಿ ಅಮಾನುಷ ಕೃತ್ಯ ನಡೆಸಿದ ವ್ಯಕ್ತಿಗಳನ್ನು 24 ಗಂಟೆಯೊಳಗೆ ಬಂಧಿಸುವಂತೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಈ ಘಟನೆಯ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಪೊಲೀಸ್ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಈ ಹಿಂದೆಯೂ ಬ್ರಹ್ಮಾವರ ಪರಿಸರದಲ್ಲಿ ಇದೇ ರೀತಿ ಘಟನೆಗಳು ಈ ಹಿಂದೆ ನಡೆದರೂ ಪೊಲೀಸ್ ಇಲಾಖೆ ಯಾವುದೇ ವ್ಯಕ್ತಿಗಳನ್ನು ಬಂಧಿಸಿಲ್ಲ. ಜಿಲ್ಲೆಯಲ್ಲಿ ಅವ್ಯಾಹತವಾಗಿರುವ ಗೋ ಕಳ್ಳತನ ಜಾಲವನ್ನು ತಕ್ಷಣ ಪತ್ತೆಹಚ್ಚಿ ಮಟ್ಟ ಹಾಕುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಕರಾವಳಿ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ದಮನಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ಈ ಘಟನೆಯನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಾಳಿ ತಕ್ಷಣ ಕ್ರಮ ಕೈಗೊಳ್ಳಬೇಕು. ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುವ ಮನಸ್ಥಿತಿಯನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು.

ಘಟನೆಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಣ್ಣೊರೆಸುವ ತಂತ್ರ ಮಾಡುತ್ತಿದ್ದು, ಹಿಂದೂಗಳ ಪಾಲಿನ ಗೋಮಾತೆಯ ಬಗ್ಗೆ ನೈಜ ಕಾಳಜಿ ಇದ್ದಲ್ಲಿ ಕೊಡಲೇ ರಾಜ್ಯದ ಗೃಹ ಸಚಿವರಿಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ದುಷ್ಕರ್ಮಿಗಳ ಬಂಧನಕ್ಕೆ ಅಗ್ರಹಿಸಲಿ, ಜಿಲ್ಲೆಯ ಕಾಂಗ್ರೆಸ್ ಮುಖಂಡರು ಘಟನೆಯನ್ನು ಒಕ್ಕೊರಲಿ ನಿಂದ ಖಂಡಿಸಲಿ ಎಂದು ಸವಾಲು ಹಾಕಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್, ಹಿಂದೂ ಸಂಘಟನೆಯ ಪ್ರಮುಖರಾದ ದಿನೇಶ್ ಮೆಂಡನ್, ಮಹೇಶ್ ಬೈಲೂರು, ರತ್ನಾಕರ ಅಮೀನ್, ಬಿಜೆಪಿ ಮುಖಂಡರಾದ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ನಿಶಾನ್ ರೈ, ಗೌತಮ್ ಅಗ್ರಹಾರ, ಮನೋಜ್ ಕುಮಾರ್ ಶೆಟ್ಟಿ, ಗುರುರಾಜ್ ರಾವ್, ಗಣೇಶ್ ಕುಲಾಲ್, ಆದರ್ಶ ಶೆಟ್ಟಿ ಕೆಂಜೂರು, ಮಹೇಂದ್ರ ನೀಲಾವರ, ಹರೀಶ್ ಶೆಟ್ಟಿ ಚೇರ್ಕಾಡಿ, ಎಸ್. ನಾರಾಯಣ, ರಾಘವೇಂದ್ರ ಕುಂದರ್, ಧನಂಜಯ ಅಮೀನ್, ಸುನೀಲ್ ಕೊಕ್ಕರ್ಣೆ, ಅಕ್ಷೇಂದ್ರ, ರಮಾನಂದ ಶೆಟ್ಟಿ ಕೆಂಜೂರು, ಉಮೇಶ್ ನಾಯ್ಕ್, ಸುರೇಶ್ ಪೇತ್ರಿ, ದೇವಾನಂದ, ಶ್ರೀಮತಿ ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago