Featured

ಉಡುಪಿ: ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ, ಪೊಲೀಸರ ಮೇಲೆ ಹಲ್ಲೆ – vishwanews24

ಉಡುಪಿ: ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ, ಪೊಲೀಸರ ಮೇಲೆ ಹಲ್ಲೆ

ಹಿರಿಯಡ್ಕ: ಉಡುಪಿಯಲ್ಲಿ ಇತ್ತೀಚೆಗೆ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳಿಬ್ಬರು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಸಂಭವಿಸಿದೆ.

ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೀನ್ ಪ್ರಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲ‌ರ್ ಎಸ್‌.ಎ.ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ. ಅಲ್ಲದೆ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಅರಂಭಿಸಿ ಸಿಬ್ಬಂದಿಯನ್ನು ತಳ್ಳಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿದ್ದಾರೆ.

ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟನ್ನು ಮತ್ತು ಚಹಾ ಮಾಡುವ ಸೌಟನ್ನು ತಂದು, ಮುಹಮ್ಮದ್ ಸಕ್ಲೀನ್ ತನ್ನ ಕೊಠಡಿಯ ಮರದ ಕುರ್ಚಿಯನ್ನು ತೆಗೆದುಕೊಂಡು ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತ್ನಿಸಿದ್ದನೆಂದು ದೂರಲಾಗಿದೆ. ಈ ವೇಳೆ ಅವರನ್ನು ಸಿಬ್ಬಂದಿ ಸೆರೆಹಿಡಿದರು. ಅಲ್ಲದೆ ಕರ್ತವ್ಯದಲ್ಲಿದ್ದ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ದರಾಮ ಬಿ.ಪಾಟೀಲ್‌ ಹಾಗೂ ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಾಗಿ ದೂರಲಾಗಿದೆ. ಅದರಂತೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago