ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು.
ಇದನ್ನೂ ಓದಿ:
ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಇದು ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…