Featured

ಉಡುಪಿ:  ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗಳಿಗೆ ತಲುಪಿದ್ದು ಇದರಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ : ಜಯಪ್ರಕಾಶ್ ಹೆಗ್ಡೆ – Vishwanews24

ಉಡುಪಿ:  ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗಳಿಗೆ ತಲುಪಿದ್ದು ಇದರಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ : ಜಯಪ್ರಕಾಶ್ ಹೆಗ್ಡೆ

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತಹ ಯೋಜನೆಗಳ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗಳಿಗೆ ತಲುಪಿದ್ದು ಇದರಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ. ಪ್ರತಿ ತಿಂಗಳು ಮನೆಯ ಗೃಹಿಣಿಯರು, ಯುವಕರು, ವಿದ್ಯಾರ್ಥಿಗಳಿಗೆ ಇದರಿಂದ ಸಹಕಾರಿಯಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಶುಕ್ರವಾರ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕೋಟತಟ್ಟು, ಸಾಲಿಗ್ರಾಮ ಪಟ್ಟಣ ಪಂಚಾಯತ್, ಕೋಡಿ, ಪಾಂಡೇಶ್ವರ, ಐರೋಡಿ ಭಾಗದಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಮೊದಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಬಿಜೆಪಿಗರು ಧರಣಿ ನಡೆಸಿದರು. ಜಾರಿಗೆ ತಂದ ಬಳಿಕ ರಾಜ್ಯ ದಿವಾಳಿಯಾಗುತ್ತಿದೆ ಎಂಬ ವಾದವನ್ನು ಮುಂದಿಡುತ್ತಿದ್ದಾರೆ. ದೇಶದ ವಿವಿಧ ಉದ್ಯಮಿಗಳ ಕೋಟ್ಯಾಂತರ ಮೊತ್ತದ ಸಾಲವನ್ನು ಮನ್ನಾ ಮಾಡಿದಾಗ ದೇಶ ದಿವಾಳಿಯಾಗುವುದಿಲ್ಲವೇ ಎಂದವರು ಪ್ರಶ್ನಿಸಿದರು.

ತಾನು ಮೀನುಗಾರಿಕಾ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಪ್ರತಿಸ್ಪರ್ಧಿ ಅಭ್ಯರ್ಥಿ ಕೂಡ ಅದೇ ಖಾತೆಯನ್ನು ನಿರ್ವಹಿಸಿ ದ್ದರು. ಜನರು ಮತ್ತು ಕಾರ್ಯಕರ್ತರು ಇಬ್ಬರ ಕೆಲಸವನ್ನು ತುಲನೆ ಮಾಡಿನೋಡಬೇಕಿದೆ. ನಿರಂತರವಾಗಿ ನಡೆಯುವ ಕಾರ್ಯಕ್ರಮ ಯಾರು ಕೂಡ ಸಚಿವರಾಗಿ ಮಾಡಬಹುದು. ಆದರೆ ಮೀನುಗಾರರಿಗೆ ಹೊಸ ಯೋಜನೆಗಳನ್ನು ತರುವುದರ ಮೂಲಕ ಅಭಿವೃದ್ಧಿ ಮಾಡುವುದು ಮುಖ್ಯ. ಆ ಕೆಲಸವನ್ನು ನಾನು ನನ್ನ ಸಚಿವ, ಸಂಸದ ಮತ್ತು ಶಾಸಕ ಅವಧಿಯಲ್ಲಿ ಮಾಡಿದ್ದು ಕಾರ್ಯಕರ್ತರು ಈ ವಿಚಾರವನ್ನು ಮತದಾರರಿಗೆ ಮನಮುಟ್ಟುವಂತೆ ಹೇಳಬೇಕಾದ ಅಗತ್ಯತೆ ಇದೆ ಎಂದರು.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

24 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

34 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 hour ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago