Featured

ಉಡುಪಿ : ಗ್ಯಾರಂಟಿ ಯೋಜನೆ ಕಾಂಗ್ರೆಸ್‌ನ ಕೈ ಹಿಡಿಯಲಿದೆ , ಪಕ್ಷ  20ಕ್ಕಿಂತ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ : ಐವನ್ ಡಿಸೋಜ – Vishwanews24

ಉಡುಪಿ : ಈ ಬಾರಿ ಕರಾವಳಿಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ : ಐವನ್ ಡಿಸೋಜ

ಉಡುಪಿ, : ಎಲ್ಲರ ನಿರೀಕ್ಷೆಗಳನ್ನು ಮೀರಿ ಸಿದ್ಧರಾಮಯ್ಯ ಸರಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೈಹಿಡಿಯಲಿದೆ. ಕಾಂಗ್ರೆಸ್ ಪಕ್ಷ 20ಕ್ಕಿಂತ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್‌ನ ರಾಜ್ಯ ವಕ್ತಾರ ಐವನ್ ಡಿಸೋಜ ಆಶಾವಾದ ವ್ಯಕ್ತಪಡಿಸಿದ್ದಾರೆ.

ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಬಡವರ ಹಾಗೂ ಮಹಿಳೆಯರ ಆರ್ಥಿಕ ಸುಧಾರಣೆ ಗಾಗಿ ಕೈಗೊಂಡ ಕಾರ್ಯಕ್ರಮಗಳು ಎಂಬುದನ್ನು ರಾಜ್ಯದ ಆರೂವರೆ ಕೋಟಿ ಜನರು ಒಪ್ಪಿಕೊಂಡಿದ್ದಾರೆ ಎಂದವರು ಹೇಳಿದರು.

ರಾಜ್ಯದಲ್ಲಿರುವ ಪ್ರತಿ ಕುಟುಂಬ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಲ್ಲಾ ಒಂದು ಯೋಜನೆಯ ಫಲಾನುಭವಿಯಾಗಿದೆ ಎಂಬುದು ಪ್ರಚಾರಕ್ಕಾಗಿ ತೆರಳಿದಾಗ ನಮಗೆ ಅನುಭವಕ್ಕೆ ಬಂದಿವೆ. ಯೋಜನೆಯ ಪ್ರತಿಯೊಬ್ಬ ಫಲಾನುಭವಿಯೂ ಈ ಬಗ್ಗೆ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತಿದೆ. ಇದು ನಮ್ಮಲ್ಲಿ ಗೆಲುವಿನ ಹುರುಪನ್ನು ತುಂಬಿದೆ ಎಂದರು.

ಮುಂದಿನ ಲೋಕಭಾ ಚುನಾವಣೆಗಾಗಿ ಪ್ರಕಟಿಸಿರುವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ನಾರಿ ನ್ಯಾಯ್ ಗ್ಯಾರಂಟಿ ಎಂಬ ಐದು ಗ್ಯಾರಂಟಿ ಯೋಜನೆಯನ್ನು ದೇಶದ ಜನತೆಗೆ ಘೋಷಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದರೆ ಈ ಐದು ಗ್ಯಾರಂಟಿಗಳೂ ದೇಶಾದ್ಯಂತ ಅನುಷ್ಠಾನಗೊಳ್ಳಲಿದೆ. ಇದರಲ್ಲಿ ಮಹಾಲಕ್ಷ್ಮಿ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಹೊಂದಿದ ಮಹಿಳೆಯರಿಗೆ ವಾರ್ಷಿಕ ಒಂದು ಲಕ್ಷ ರೂ.ನ ಭರವಸೆ ನೀಡಲಾಗಿದೆ ಎಂದರು.

ಈ ಬಾರಿ ಕರಾವಳಿಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜಯಪ್ರಕಾಶ್ ಹೆಗ್ಡೆ ಅವರ ಗೆಲುವು ಸಂಸತ್ತಿನಲ್ಲಿ ಕ್ಷೇತ್ರಕ್ಕೆ ಸಮರ್ಥ ಜನಪ್ರತಿನಿಧಿಯನ್ನು ಒದಗಿಸಲಿದೆ.ಇಲ್ಲಿ ಹೆಗ್ಡೆ ಅವರ ಗೆಲುವು ನೂರಕ್ಕೆ ನೂರು ಗ್ಯಾರಂಟಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹ್ಡೆ ಕೊಳ್ಕೆಬೈಲ್, ಭಾಸ್ಕರ ರಾವ್ ಕಿದಿಯೂರು, ಕೃಷ್ಣಮೂರ್ತಿ ಆಚಾರ್ಯ, ಪ್ರಶಾಂತ್ ಜತ್ತನ್ನ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago