ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್ ವಂಚಕರು ಅನಾಮಧೇಯ ಎಪಿಕೆ ಫೈಲ್‌ಗಳನ್ನು ಕಳುಹಿಸಿ ಗ್ರಾಹಕರನ್ನು ವಂಚಿಸುವ ಘಟನೆಗಳು ನಡೆಯುತ್ತಿವೆ.
ಮುಂಬಯಿಯಲ್ಲಿದ್ದು ಸದ್ಯ ಉಡುಪಿಯಲ್ಲಿರುವ ಲೀಲಿ ಪ್ಲೋರಿನ್ ಡಿಸಿಲ್ವಾ ವಂಚನೆಗೊಳಗಾದವರು. ಅವರಿಗೆ ಮಾ.11 ರಂದು ಬೆಳಗ್ಗೆ 11.30ಕ್ಕೆ ಮುಂಬಯಿಯ ಮಹಾನಗರ ಗ್ಯಾಸ್ ಲಿಮಿಡೆಟ್ ನಿಂದ ದೇವೇಶ ಜೋಷಿ ಕರೆ ಮಾಡಿ ಗ್ಯಾಸ್ ಗೆ ಆನ್‌ಲೈನ್‌ನಲ್ಲಿ ಹಣ ಪಾವತಿಸಿರುವ ಬಗ್ಗೆ ಅಪ್‌ಡೇಟ್ ಆಗಿಲ್ಲ ಎಂದು ತಿಳಿಸಿ ವಾಟ್ಸ್ ಆ್ಯಪ್ ನಲ್ಲಿ ಮಹಾನಗರ ಗ್ಯಾಸ್ ಎಪಿಕೆ ಆ್ಯಪ್ ಕಳುಹಿಸಿ ಅದನ್ನು ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ :
ಅದರಂತೆ ಲೀಲಿ ಪ್ಲೋರಿನ್ ಡಿಸಿಲ್ವಾ ಅದನ್ನ ಡೌನ್‌ಲೋಡ್ ಮಾಡಿದ್ದಾರೆ. ಈ ವೇಳೆ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ಆರೋಪಿಯು ಲೀಲಿ ಪ್ಲೋರಿನ್ ಡಿಸಿಲ್ವಾ ಅವರ ಪತಿಯ ಕೆನರಾ ಬ್ಯಾಂಕ್ ಸಂತೆಕಟ್ಟೆ ಬ್ರಾಂ ಖಾತೆ ಸಂಖ್ಯೆ ಪಡೆದುಕೊಂಡಿದ್ದಾರೆ. ಅನಂತರ ಅವರ ಎರಡೂ ಬ್ಯಾಂಕ್ ಖಾತೆಗಳಿಂದ ಒಟ್ಟು 69,005 ರೂ.ಕಡಿತಗೊಂಡಿದೆ. ಈ ವಂಚನೆಯ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…