Featured

ಉಡುಪಿ: ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳ ನೇಮಕಾತಿ :  ಅರ್ಜಿ ಸಲ್ಲಿಸಲು ಜೂನ್ 27 ಕೊನೆಯ ದಿನ – Vishwanews24

ಉಡುಪಿ: ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳ ನೇಮಕಾತಿ :  ಅರ್ಜಿ ಸಲ್ಲಿಸಲು ಜೂನ್ 27 ಕೊನೆಯ ದಿನ

ಉಡುಪಿ: ಐಬಿಪಿಸ್ ಮುಖಂತಾರ ದೇಶದ 43 ಗ್ರಾಮೀಣ ಬ್ಯಾಂಕುಗಳಲ್ಲಿ 8106 ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇದೆ ಜೂನ್ 27 ಕೊನೆಯ ದಿನವಾಗಿದೆ.

ರಾಜ್ಯದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಹಾಗು ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಸೇರಿ 832 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇದರಲ್ಲಿ 173 ಆಫೀಸ್ ಅಸಿಸ್ಟೆಂಟ್, 429-ಆಫೀಸರ್ ಸ್ಕೇಲ್-1, 230 ಆಫಿಸರ್ ಸ್ಕೇಲ್ –2 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆ ಆಗಸ್ಟ್ ನಲ್ಲಿ ಹಾಗು ಮುಖ್ಯ ಪರೀಕ್ಷೆ ಸೆಪ್ಟೆಂಬರ್/ಅಕ್ಟೋಬರ್ ನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಕೇಂದ್ರ ಸರಕಾರದ ವಿಶೇಷ ಆದೇಶದ ಪ್ರಕಾರ ರಾಜ್ಯದ ಅಭ್ಯರ್ಥಿಗಳು ಕನ್ನಡ, ಕೊಂಕಣಿ, ಹಿಂದಿ ಹಾಗು ಇಂಗ್ಲೀಷಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿ ಕೊಡಲಾಗಿದೆ ಎಂದು ಐಬಿಪಿಎಸ್ ತಿಳಿಸಿದೆ.

ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 850 ರೂ. ಹಾಗು ಎಸ್ಸಿ /ಎಸ್ಟಿ /ವಿಶೇಷ ಚೇತನರು/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂ ನಿಗದಿ ಪಡಿಸಲಾಗಿದೆ. ಬ್ಯಾಂಕ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ. ಆನ್ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಲಿ ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ಪದವೀಧರ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಲು https://www.ibps.in/ ಲಿಂಕ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಿ ಜಿಲ್ಲೆಯ ಹೆಚ್ಚಿನ ಪದವೀಧರರು ಬ್ಯಾಂಕ್ ಹುದ್ದೆಗಳಿಗೆ ನೇಮಕಾತಿಗೊಳ್ಳುವ ಸದವಕಾಶವನ್ನು ಪಡೆಯಬೇಕೆಂದು ಲೀಡ್ ಬ್ಯಾಂಕ್, ಉಡುಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಐಬಿಪಿಸ್ ನ ಅಧಿಕೃತ ವೆಬಸೈಟ್ https://www.ibps.in/  ಮೂಲಕ ಪಡೆಯಲು ತಿಳಿಸಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

21 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

22 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

22 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

22 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

22 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago