Featured

ಕಾರ್ಕಳ : ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಇದರ ನೂತನ ಕಟ್ಟಡ ಉದ್ಘಾಟನೆ -Vishwanews24

ಕಾರ್ಕಳ : ಗ್ರಾಮೀಣ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಆದ್ಯತೆ : ಸಚಿವ ಬೊಮ್ಮಾಯಿ -Vishwanews24

ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಇದರ ನೂತನ ಕಟ್ಟಡ ಉದ್ಘಾಟನೆ -Vishwanews24

ಉಡುಪಿ : ಹೊರಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶದಿಂದ ತಾಲೂಕು ಕೇಂದ್ರಗಳಿಗೆ ವಿದ್ಯಾಭ್ಯಾಸಕ್ಕಾಗಿ ವಲಸೆ ಬರುವಂತಹ ಹೆಣ್ಣು ಮಕ್ಕಳಿಗೆ ತಂಗಲು ಅನುಕೂಲವಾಗುವಂತೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೂತನವಾದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಕಾರ್ಕಳದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ನಿರ್ಮಿತಿ ಕೇಂದ್ರ ಉಡುಪಿ ಇವರ ಆಶ್ರಯದಲ್ಲಿ 1.99 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಇದರ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಅತ್ಯಂತ ಶಿಸ್ತು, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ವಿದ್ಯಾರ್ಜನೆ ಗೈದು ತಮ್ಮ ಭವಿಷ್ಯವನ್ನು ರೂಪಿಸಿ, ಅದರ ಮುಖೇನ ನಾಡಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಮಾದರಿಯಾಗಬೇಕು. ಸಮಾಜ ನಿರ್ಮಾಣದ ಕೇಂದ್ರ ಬಿಂದುವಾದ ಹೆಣ್ಣು ಮಕ್ಕಳಿಗೆ ಸರ್ಕಾರವು ಆಧುನಿಕ ಶಿಕ್ಷಣವನ್ನು ನೀಡಿದ್ದಲ್ಲಿ ಸುಸಜ್ಜಿತ ಹಾಗೂ ಅಕ್ಷರ ಭರಿತ ಜನಾಂಗ ನಿರ್ಮಾಣ ಮಾಡುವಲ್ಲಿ ಯಶ ಸಾಧಿಸಬಹುದು ಎಂದರು.

ರಾಜ್ಯ ಸರ್ಕಾರದ ಸಚೇತಕ ಸುನೀಲ್ ಕುಮಾರ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣಗೊಂಡ ಈ ವಸತಿ ಶಾಲೆ ಇನ್ನಷ್ಟು ವಿದ್ಯಾರ್ಥಿಗಳನ್ನು ಆಕರ್ಷಿಸುವಂತಾಗಲಿ. ಇಲ್ಲಿ ಕಲಿಯುವಂತಹ ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾಭ್ಯಾಸ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರುವಂತಹ ಒಳ್ಳೆಯ ವಾತಾವರಣ ನಿರ್ಮಾಣವಾಗಲೀ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

2 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

3 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

3 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

4 hours ago