Featured

ಉಡುಪಿ : ಗ್ರಾಮ ಒನ್ ನಿಂದ ಗ್ರಾಮೀಣ ಜನತೆಗೆ ಸುಲಭದಲ್ಲಿ ಸರ್ಕಾರಿ ಸೇವೆ : ಸಚಿವ ಎಸ್.ಅಂಗಾರ – Vishwanews24

ಉಡುಪಿ : ಗ್ರಾಮ ಒನ್ ನಿಂದ ಗ್ರಾಮೀಣ ಜನತೆಗೆ ಸುಲಭದಲ್ಲಿ ಸರ್ಕಾರಿ ಸೇವೆ : ಸಚಿವ ಎಸ್.ಅಂಗಾರ – Vishwanews24

ಉಡುಪಿ: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳಿಗೆ ಗ್ರಾಮೀಣ ಜನತೆ ನಗರ ಪ್ರದೇಶಕ್ಕೆ ಬರುವ ಅಗತ್ಯವಿರದೇ ತಮ್ಮ ಗ್ರಾಮದಲ್ಲಿಯೇ ಅತ್ಯಂತ ಸುಲಭವಾಗಿ ಅಗತ್ಯವಿರು ಹಲವಾರು ಸರ್ಕಾರಿ ಸೇವೆಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯಬಹುದು ಎಂದು ಮೀನುಗಾರಿಕೆ ,ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.

ಅವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಒನ್ ಕೇಂದ್ರವನ್ನು ಉದ್ಘಾಟಿಸಿ, ಮುಖ್ಯಮಂತ್ರಿಗಳೊ0ದಿಗೆ ನಡೆದ ವರ್ಚುವಲ್ ಕಾರ್ಯಕ್ರಮದ ನಂತರ ಮಾತನಾಡಿದರು.

ಇದನ್ನೂ ಓದಿ :

ಗ್ರಾಮೀಣ ಜನತೆ ವಿವಿಧ ಸರಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಿದ್ದ ದಾಖಲೆಗಳಿಗಾಗಿ ದೂರದ ಊರುಗಳಿಂದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಗೆ ಆಗಮಿಸಿ,ಸರದಿಯಲ್ಲಿ ನಿಂತು ದಾಖಲೆಗಳನ್ನು ಪಡೆಯಲು ಕಷ್ಟಪಡಬೇಕಿತ್ತು, ಇದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ಗ್ರಾಮ ಒನ್ ಕೇಂದ್ರಗಳನ್ನು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಆರಂಭಿಸಲು ಸೂಚಿಸಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ 105 ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ಗ್ರಾಮ ಒನ್ ಕೇಂದ್ರಗಳಲ್ಲಿ ಸರ್ಕಾರದ ವಿವಿಧ 48 ಇಲಾಖೆಗಳ ಸೇವಾ ಸಿಂಧುವಿನ 750 ಕ್ಕೂ ಹೆಚ್ಚಿನ ಸೇವೆ ,ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸೇವೆ,ಇ ಸ್ಟಾಂಪಿ0ಗ್,ಬ್ಯಾ0ಕಿ0ಗ್ ಸೇವೆ ,ಸಕಾಲ, ಮಾಹಿತಿ ಹಕ್ಕು ಅಧಿನಿಯಮ ಇನ್ನಿತರ ಸೇವಾ ಸೌಲಭ್ಯಗಳು ದೊರೆಯಲಿವೆ, ಮುಂದಿನ ದಿನಗಳಲ್ಲಿ ಆಧಾರ್ ಕೇಂದ್ರದ ಸೇವೆಗಳು ಸಹ ಇಲ್ಲಿ ದೊರೆಯಲಿದ್ದು,ಸಾರ್ವಜನಿಕರು ಈ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳುವಂತೆ ಸಚಿವರು ಹೇಳಿದರು. ವರ್ಚುವಲ್ ಸಭೆಯ ಮೂಲಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣ ಜನತೆ ಯವುದೇ ಮಧ್ಯವರ್ತಿಗಳ ನೆರವಿಲ್ಲದೇ ಅತ್ಯಂತ ಸುಲಭವಾಗಿ ತಮ್ಮ ಗ್ರಾಮಗಳಲ್ಲಿಯೇ ಅಗತ್ಯ ಸರಕಾರಿ ದಾಖಲೆಗಳನ್ನು ಕಡಿಮೆ ಖರ್ಚಿನಲ್ಲಿ ಮತ್ತು ಅತ್ಯಂತ ತ್ವರಿತವಾಗಿ ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯಬಹುದಾಗಿದೆ. ಈಗಾಗಲೇ ಪ್ರಾಯೋಗಿಕವಾಗಿ ಯೋಜನೆಯನ್ನು ಜಾರಿಗೊಳಿಸಿದ್ದ 4 ಜಿಲ್ಲೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ.

ಇಂದಿನಿ0ದ ರಾಜ್ಯದ 12 ಜಿಲ್ಲೆಗಳ 3000 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕೆಂಧ್ರಗಳು ಆರಂಭಗೊಳ್ಳಲಿವೆ. ಎಲ್ಲಾ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯಲ್ಲಿ ಈ ಕೇಂದ್ರಗಳ ಸಮರ್ಪಕ ಕಾರ್ಯನಿರ್ವಹಣೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಎಲ್ಲಾ ಸಚಿವರು ತಮ್ಮ ಪ್ರವಾಸದ ಸಂದರ್ಭಗಳಲ್ಲಿ ಈ ಕೇಂದ್ರಗಳಿಗೆ ಬೇಟಿ ನೀಡಿ ಅದರ ಕಾರ್ಯವೈಖರಿಯನ್ನು ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ :

ಮುಖ್ಯಮಂತ್ರಿಗಳ ಸೂಚನೆಯಂತೆ ರಾಜ್ಯದಲ್ಲಿ ಪ್ರಪ್ರಥಮವಾಗಿ ಉಡುಪಿಯ ಉದ್ಯಾವರ ಗ್ರಾಮ ಪಂಚಾಯತ್ ನ ಗ್ರಾಮ ಒನ್ ಕೆಂದ್ರದಲ್ಲಿ ಆರ್.ಟಿ.ಸಿ ಪತ್ರವನ್ನು ಗ್ರಾಮಸ್ಥರಿಗೆ ಸಚಿವ ಅಂಗಾರ ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್, ಉದ್ಯಾವರ ಗ್ರಾ.ಪಂ. ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 hour ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago