ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ -2023 ಕ್ಕೆ ಸಂಬAಧಿಸಿದAತೆ, ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯತ್‌ಗಳ ಸದಸ್ಯ ಸ್ಥಾನಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಹಾಗೂ ಖಾಲಿ ಉಳಿದಿರುವ ಗ್ರಾಮ ಪಂಚಾಯತ್‌ಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ.
ಜಿಲ್ಲೆಯ ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮ ಪಂಚಾಯತ್ ಹಾಗೂ ಕುಂದಾಪುರ ತಾಲೂಕು ಕುಂಭಾಶಿ ಗ್ರಾಮ ಪಂಚಾಯತ್‌ನ ತಲಾ ಒಂದು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಫೆಬ್ರವರಿ 14 ಕೊನೆಯ ದಿನ. ಫೆ. 15 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಫೆ. 17 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಫೆ. 25 ರ ಶನಿವಾರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅವಶ್ಯವಿದ್ದಲ್ಲಿ ಮರು ಮತದಾನ ಫೆ. 27 ರಂದು ನಡೆಯಲಿದೆ. ಫೆ. 28 ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ.
ಚುನಾವಣೆ ನಡೆಯುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಫೆ. 8 ರಿಂದ ಫೆ. 28 ರ ವರೆಗೆ ಚುನಾವಣಾ ನೀತಿ ಸಂಹಿತೆಯು
ಜಾರಿಯಲ್ಲಿರಲಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…