Featured

ಉಡುಪಿ ಗ್ರಾ. ಪಂ. ಚುನಾವಣೆ : ತಾಲೂಕಿನಾದ್ಯಂತ ಶಾಂತಿಯುತ ಮತದಾನ -Vishwanews24

ಉಡುಪಿ ಗ್ರಾ. ಪಂ. ಚುನಾವಣೆ : ತಾಲೂಕಿನಾದ್ಯಂತ ಶಾಂತಿಯುತ ಮತದಾನ -Vishwanews24

ಉಡುಪಿ: ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆ ಮುಂಜಾನೆಯಿಂದಲೇ ಆರಂಭಗೊಂಡಿದೆ. ತಾಲೂಕಿನಾದ್ಯಂತ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು. ಸುರಕ್ಷತಾ ಕ್ರಮಗಳೊಂದಿಗೆ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಂಜೆ 5 ಗಂಟೆ ವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.

ಬೆಳಿಗ್ಗೆ 9 ಗಂಟೆವರೆಗೆ: ಉಡುಪಿ 15.87, ಹೆಬ್ರಿ 15.47, ಬ್ರಹ್ಮವರ 16.49, ಬೈಂದೂರು 11.49. ಒಟ್ಟು 14.37 ಶೇಕಡಾ ಮತದಾನವಾಗಿದೆ.

67 ಗ್ರಾ.ಪಂಗಳಿಗೆ ಮತದಾನ: ಮೊದಲ ಹಂತದ ಚುನಾವಣೆಯ ಮತದಾನಕ್ಕೆ ಕ್ಷಣಗಣಗೆ ಆರಂಭವಾಗಿದ್ದು, 3,70,234 ಮತದಾರರು ಹಕ್ಕು ಚಲಾಯಿಸಲು ಅರ್ಹತೆ ಪಡೆದಿದ್ದಾರೆ. ಒಟ್ಟು 560 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಉಡುಪಿ, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲ್ಲೂಕುಗಳ 67 ಗ್ರಾಮ ಪಂಚಾಯಿತಿಗಳ 1,047 ಸ್ಥಾನಗಳಿಗೆ ಆಯ್ಕೆ ನಡೆಯಲಿದೆ. 2,349 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 1,108 ಮಹಿಳೆಯರು, 149 ಎಸ್‌ಸಿ, 182 ಎಸ್‌ಟಿ, 543 ಹಿಂದುಳಿದ ‘ಅ’ ವರ್ಗ, 132 ಹಿಂದುಳಿದ ‘ಬ’ ವರ್ಗ ಮತ್ತು 1,343 ಸಾಮಾನ್ಯ ಕ್ಷೇತ್ರದ ಸ್ಪರ್ಧಿಗಳಿದ್ದಾರೆ.

Vishwa News 24

Recent Posts

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

4 minutes ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

35 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

40 minutes ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

48 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago