Featured

ಉಡುಪಿ ಘರ್ಷಣೆಗೆ ಮಾಜಿ ಸಚಿವ ಮಧ್ವರಾಜ್ ಖಂಡನೆ ; ಭಾರತ್ ಬಂದ್ ಗೆ ಉಡುಪಿಯ ಜನತೆಯಿಂದ ಉತ್ತಮ ಸ್ಪಂದನೆ : ಮಧ್ವರಾಜ್

ಉಡುಪಿ, : ಭಾರತ್ ಬಂದ್ ವೇಳೆ ಉಡುಪಿಯಲ್ಲಿ ನಡೆದ ಘರ್ಷಣೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಖಂಡಿಸಿದ್ದಾರೆ. ‘ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದರು. ಅಂಗಡಿಗಳಿಗೆ ತೆರಳಿ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಬಿಜೆಪಿಯ ಕಾರ್ಯಕರ್ತರು ನಮ್ಮ ಪ್ರತಿಭಟನೆಗೆ ಅಡ್ಡಿ ಪಡಿಸಿದ್ದಾರೆ. ಮಾತ್ರವಲ್ಲದೆ, ಮುಚ್ಚಿದ್ದ ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ತೆರೆಯಲು ಮುಂದಾಗಿದ್ದಾರೆ ಎಂದರು.

ಇನ್ನು ಪೋಲೀಸರು ಕೂಡ ಕಾಂಗ್ರೆಸ್ ಕಾರ್ಯಕರ್ತರಿಗೆ ಅನಾವಶ್ಯಕವಾಗಿ ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಆರೋಪಿಸಿದರು. ಇದರ ಕುರಿತಾಗಿ ಉಸ್ತುವಾರಿ ಮಂತ್ರಿ ಡಾ| ಜಯಮಾಲ ಹಾಗೂ ಗೃಹಮಂತ್ರಿಗಳಿಗೆ ಮಾಹಿತಿ ನೀಡಲಾಗುವುದು. ಎಸ್ಪಿ ಕಛೇರಿ ಎದುರು ಬಿಜೆಪಿಯವರು ಧರಣಿ ಮಾಡುವ ಅವಶ್ಯಕತೆ ಏನಿತ್ತು? ಎಂದು ಅವರು ಪ್ರಶ್ನಿಸಿದ್ದಾರೆ. ಭಾರತ್ ಬಂದ್ ಗೆ ಉಡುಪಿಯ ಜನತೆ ಉತ್ತಮ ಸ್ಪಂದನೆ ನೀಡಿದ್ದರು.

ಎಲ್ಲಿಯೂ ಬಲವಂತದ ಬಂದ್ ಮಾಡಲಾಗಿಲ್ಲ. ಈ ಹಿಂದೆಯೂ ಶಾಂತಿಯುತ ಪ್ರತಿಭಟನೆಗೆ ಬಿಜೆಪಿಯವರು ಅಡ್ಡಿಪಡಿಸಿದ್ದರು. ನಾವು ಯಾವತ್ತೂ ಅವರ ಪ್ರತಿಭಟನೆಗೆ ಅಡ್ಡಿ ಪಡೆಸಿಲ್ಲ. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಖುದ್ದು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿದ್ದು ಖಂಡನೀಯ. ಕಾಂಗ್ರೆಸ್ ನಗರಸಭೆಯ ಕೌನ್ಸಿಲರ್ ರಮೇಶ್ ಕಾಂಚನ್, ವಿಜಯ ಪೂಜಾರಿ ಹಾಗೂ ಕಾರ್ಯಕರ್ತ ಆರ್ ಕೆ ರಮೇಶ್ ಮೇಲೆ ಪೋಲಿಸ್ ದೌರ್ಜನ್ಯ ಮಾಡಿದ್ದು ಖಂಡನೀಯ. ಇಂತಹ ಪ್ರಕ್ಷುಬ್ದ ಸಮಯದಲ್ಲಿ ತಾಳ್ಮೆಯಿಂದ ಇರಬೇಕಾದ ಪೋಲಿಸರೇ ಸಂಯಮ ಕಳೆದು ಕೊಂಡರೆ ಹೇಗೆ ಎಂದು ಮಾಜಿ ಶಾಸಕರು ಪ್ರಶ್ನಿಸಿದರು. ಈ ರೀತಿಯ ಪೊಲೀಸ್ ನಡೆಯ ಬಗ್ಗೆ ತನಿಖೆ ಆಗಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಎಲ್ಲಾದರೂ ಕಾಂಗ್ರೆಸ್ ಕಾರ್ಯಕರ್ತರು ಬಲವಂತವಾಗಿ ಬಂದ್ ಮಾಡಿದ್ದಾದಲ್ಲಿ ಅದೂ ಕೂಡ ತನಿಖೆಯಾಗಲಿ ಎಂದವರು ಹೇಳಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

7 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

7 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

7 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

7 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

12 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 hours ago