Featured

ಉಡುಪಿ: ಚರ್ಚುಗಳಲ್ಲಿ ಪೂಜೆ ಸಹಿತ ಹೊಸ ವರ್ಷಕ್ಕೆ ಸ್ವಾಗತ ಕೋರಿದ ಕ್ರೈಸ್ತರು – vishwanews24

ಉಡುಪಿ: ಚರ್ಚುಗಳಲ್ಲಿ ಪೂಜೆ ಸಹಿತ ಹೊಸ ವರ್ಷಕ್ಕೆ ಸ್ವಾಗತ ಕೋರಿದ ಕ್ರೈಸ್ತರು

ಉಡುಪಿ: ನೂತನ 2024ರ ವರ್ಷವನ್ನು ಉಡುಪಿ ಜಿಲ್ಲೆಯ ಕ್ರೈಸ್ತರು ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಸ್ವಾಗತಿಸಿದರು.

ರವಿವಾರ ಸಂಜೆ ವೇಳೆ ಇಗರ್ಜಿಗಳಿಗೆ ತೆರಳಿದ ಕ್ರೈಸ್ತರು ಕಳೆದ 2023 ರ ವರ್ಷದಲ್ಲಿ ಸರ್ವರೀತಿಯಲ್ಲಿ ತಮ್ಮನ್ನು ಕಾಪಾಡಿ ದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುವುದೊರಂದಿಗೆ ನೂತನ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ರವಿವಾರ ರಾತ್ರಿ ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು.

ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಪ್ರಾರ್ಥನೆ ಸಲ್ಲಿಸುವಂತೆ ಸಲಹೆ ನೀಡುವುದರೊಂದಿಗೆ ವಿಶ್ವಶಾಂತಿಗಾಗಿ ನಮ್ಮಿಂದಾಗುವ ಪ್ರಯತ್ನವನ್ನು ಮಾಡುವಂತೆ ಕ್ರೈಸ್ತ ಸಮುದಾಯಕ್ಕೆ ಕರೆ ನೀಡಿದರು.

ಪವಿತ್ರ ಬಲಿಪೂಜೆಯ ಮುಂಚಿತವಾಗಿ ಕಳೆದು ಹೋಗಲಿರುವ 2023ನೇ ವರ್ಷದಲ್ಲಿ ದೇವರು ಮಾಡಿದ ಎಲ್ಲಾ ರೀತಿಯ ಕ್ರಪಾವರಗಳಿಗೆ ದೇವರಿಗೆ ವಂದನೆಗಳನ್ನು ಅರ್ಪಿಸಿ ಪರಮ ಪ್ರಸಾದದ ವಿಶೇಷ ಆರಾಧನೆಯನ್ನು ನಡೆಸುವುದರೊಂದಿಗೆ 2024ರಲ್ಲಿ ವಿಶೇಷವಾಗಿ ಯುದ್ದಪೀಡಿತ ರಾಷ್ಟ್ರಗಳಲ್ಲಿ ಹಾಗೂ ಇಡೀ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಲಾಯಿತು.

ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಪ್ರಧಾನ ಧರ್ಮಗುರು ವಂ| ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ |ಜೋಯ್ ಅಂದ್ರಾದೆ, ಅತಿಥಿ ಧರ್ಮಗುರುಗಳಾದ ವಂ|ಹೆಕ್ಟೆರ್ ಡಿಸೋಜಾ, ನಿತೇಶ್ ಡಿಸೋಜಾ, ವಂ|ರೋನ್ಸನ್ ಡಿಸೋಜಾ ಉಪಸ್ಥಿತರಿದ್ದರು.

ಜಿಲ್ಲೆಯ ಪ್ರಮುಖದ ಚರ್ಚುಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ಧರ್ಮಗುರು ವಂ|ಡಾ| ಲೆಸ್ಲಿ ಡಿ’ಸೋಜಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ|ಸ್ಟ್ಯಾನಿ ತಾವ್ರೊ, ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ | ಆಲ್ಬನ್ ಡಿಸೋಜಾ, ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ವಂ |ಡೆನಿಸ್ ಡೆಸಾ ಇವರುಗಳ ನೇತೃತ್ವದಲ್ಲಿ ಹೊಸ ವರ್ಷ ಆಚರಣೆಯ ಪ್ರಯುಕ್ತ ಬಲಿಪೂಜೆಗಳು ನಡೆದವು

ಹೊಸ ವರ್ಷಾಚರಣೆ ಸ್ವಾಗತಿಸುವ ಅಂಗವಾಗಿ ಚರ್ಚುಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಕೇಕ್ ವಿತರಣೆ ಕೂಡ ನಡೆಯಿತು. ಬಲಿಪೂಜೆಯ ಬಳಿಕ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

5 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

5 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 days ago