ಉಡುಪಿ : ನಗರದ ರಿಕ್ಷಾ ಚಾಲಕ, ಕಾಡುಬೆಟ್ಟು ನಿವಾಸಿ ತಮ್ಮ ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡುವಿನಿಂದ ಬಸ್ ನಿಲ್ದಾಣದ ಕಡೆಗೆ ಕರೆದುಕೊಂಡು ಹೋಗುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದ ಘಟನೆ ಇಂದು ನಡೆದಿದೆ.
ರಿಕ್ಷಾ ಚಾಲಕ ಸುರೇಶ ಎಂಬವರು ಕುಸಿದುಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾದಾಗ ಅವರು ಚಲಾಯಿಸುತ್ತಿದ್ದ ರಿಕ್ಷಾವು ವಿರುದ್ಧ ದಿಕ್ಕಿನಲ್ಲಿ ಚಲಿಸಿ ವಿದ್ಯುತ್ ಕಂಬಕ್ಕೆ ಗುದ್ದಿದೆ.
ಚಾಲಕ ಸೀಟಿನಲ್ಲಿ ಕುಸಿದು ಬಿದ್ದಿದ್ದ ಸುರೇಶ್ ರವರನ್ನು ಅದೇ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕ ಮತ್ತು ಪ್ರಯಾಣಿಕರು ತಮ್ಮ ರಿಕ್ಷಾದಲ್ಲಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕನ ಸ್ಥಿತಿ ಗಂಭೀರ ವಾಗಿದ್ದು ಇಬ್ಬರು ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…