Featured

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ.

ದೆಹಲಿ-ಎರ್ನಾಕುಳಂ ನಡುವೆ ಸಂಚರಿಸುವ ಟ್ರೈನ್ ಸಂಖ್ಯೆ 12284 ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ರೈಲಿಗೆ ಇಂದ್ರಾಳಿ ನಿಲ್ದಾಣದಲ್ಲಿ ನಿಲುಗಡೆ ಇರಲಿಲ್ಲ.

ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಆರ್‌ಪಿಎಫ್ ಸಿಬ್ಬಂದಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಧಾವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಕ್ಷಣ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಮೃತ ವ್ಯಕ್ತಿಯ ಬಳಿ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.ಮೃತರ ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

Vishwa News 24

Recent Posts

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

24 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

37 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago