Featured

ಉಡುಪಿ: ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ  ; ಸವಾರ ಗಂಭೀರ , ಪತ್ನಿ ಹಾಗೂ ಮಗು ಅಪಾಯದಿಂದ ಪಾರು – vishwanews24

ಉಡುಪಿ: ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ  ; ಸವಾರ ಗಂಭೀರ , ಪತ್ನಿ ಹಾಗೂ ಮಗು ಅಪಾಯದಿಂದ ಪಾರು

ಉಡುಪಿ: ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ಏಕಾಏಕಿ ವಿದ್ಯುತ್‌ ತಂತಿ ತುಂಡಾಗಿ ಬಿದ್ದು ಸವಾರ ಗಂಭೀರ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್‌ನಲ್ಲಿದ್ದ ಅವರ ಪತ್ನಿ ಹಾಗೂ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಮಣಿಪಾಲ ಸಂಸ್ಥೆಯ ಯುನಿಟ್‌ 5ರ ಉದ್ಯೋಗಿ ಶಶಿಧರ ಶೆಟ್ಟಿ ಗಂಭೀರ ಗಾಯಗೊಂಡವರು.

ಕುಂಜಾರುಗಿರಿ ನಿವಾಸಿಯಾದ ಅವರು ಸೋಮವಾರ ಬೆಳಗ್ಗೆ ಪತ್ನಿ, ಮಗುವಿನೊಂದಿಗೆ ಅಲೆವೂರಿನಿಂದ ಮಣಿಪಾಲದತ್ತ ಬರುತ್ತಿದ್ದ ವೇಳೆ ಕೈಗಾರಿಕಾ ಪ್ರದೇಶದ ಬಸ್‌ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ. ಮಗುವನ್ನು ಎಲ್‌ಕೆಜಿಗೆ ಬಿಡಲೆಂದು ಬರುತ್ತಿದ್ದಾಗ ಗಾಳಿ-ಮಳೆ ಬಂದಿದ್ದು, ಈ ವೇಳೆ ಏಕಾಏಕಿ ವಿದ್ಯುತ್‌ ತಂತಿ ತುಂಡಾಗಿ ಇವರ ಕುತ್ತಿಗೆಗೆ ಸುತ್ತುವರಿಯಿತು. ಪರಿಣಾಮ ಪತ್ನಿ ಮತ್ತು ಮಗುವಿನ ಸಹಿತ ಅವರು ಕೆಳಗೆ ಬಿದ್ದರು. ತಂತಿ ಬೀಳುವಾಗ ವಿದ್ಯುತ್‌ ಕಡಿತಗೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.

ಅವರಿಗೆ ಸಿಟಿ ಸ್ಕ್ಯಾನ್‌ ಮಾಡಲಾಗಿದ್ದು, ಮಂಗಳವಾರ ಎಂಆರ್‌ಐ ಸ್ಕ್ಯಾನ್‌ ಮಾಡಲು ಉದ್ದೇಶಿಸಲಾಗಿದೆ. ಕುತ್ತಿಗೆಯಿಂದ ಕೆಳಭಾಗದಲ್ಲಿ ಪ್ರಸ್ತುತ ಸ್ಪರ್ಶ ಜ್ಞಾನ ಇಲ್ಲವಾಗಿದೆ. ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 minute ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 minutes ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

21 minutes ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

23 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

24 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

24 hours ago