ಉಡುಪಿ : ಚಾಕು ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಅವರಲ್ಲಿದ್ದ 1 ಲ.ರೂ. ಅನ್ನು ಕಸಿದು ಜೀವಬೆದರಿಕೆ ಹಾಕಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ.
ಆತ್ರಾಡಿಯ ಮಹಮ್ಮದ್ ನಿಹಾಲ್ ಅವರು ಬಸ್‌ನ ಕಲೆಕ್ಷನ್ ವ್ಯವಹಾರ ಮಾಡಿಕೊಂಡಿದ್ದು, ಜೂ. 20ರಂದು ಬಸ್‌ನ ಕಲೆಕ್ಷನ್ ಹಣ ವನ್ನು ತೆಗೆದುಕೊಂಡು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬೇಕರಿ ಬಳಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬಲವಂತವಾಗಿ ಅವರನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ.
ಬಳಿಕ ಚಾಕು ತೋರಿಸಿ, ಕೈಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಣವನ್ನು ಕಸಿದು ಜೀವ ಬೆದರಿಕೆ ಹಾಕಿದ್ದಾರೆ.
ಆರೋಪಿಗಳನ್ನು ಶಾರೀಕ್, ಇರ್ಫಾನ್ ಎಂದು ಗುರುತಿಸಲಾಗಿದೆ. ಇವರ ಜತೆಗೆ ಇನ್ನೂ ಇಬ್ಬರು ಅಪರಿಚಿತರು ಇದ್ದರು ಎಂದು ಮಹಮ್ಮದ್ ನಿಹಾಲ್ ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…