Featured

ಉಡುಪಿ :  ಚಿಕಿತ್ಸೆ ನೀಡುತ್ತಿದ್ದ ವೇಳೆ ಹೃದಯಾಘಾತ ; ಜಿಲ್ಲಾ ಆಸ್ಪತ್ರೆ ವೈದ್ಯೆ ಸಾವು – vishwanews24

ಉಡುಪಿ :  ಚಿಕಿತ್ಸೆ ನೀಡುತ್ತಿದ್ದ ವೇಳೆ ಹೃದಯಾಘಾತ – ಜಿಲ್ಲಾ ಆಸ್ಪತ್ರೆ ವೈದ್ಯೆ ಸಾವು

ಉಡುಪಿ : ದೇಶಾದ್ಯಂತ ಹೃದಯಾಘಾತ ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ (Dr Shashikala) ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು.

ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು.

ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.

ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

17 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

17 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

18 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

18 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

18 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

19 hours ago