ಉಡುಪಿ, : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ. ಕ್ಷೇತ್ರದ ಹತ್ತು ಶೇಕಡದಷ್ಟು ಕಾಂಗ್ರೆಸಿಗರು ಕೂಡಾ ಜೆಡಿಎಸ್ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಂಕ್ಷಿಯಾದ ಎಐಸಿಸಿ ಸದಸ್ಯ ಅಮೃತ್ ಶೆಣೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಈ ವಿಚಾರ ಅಧಿಕೃತವಾಗಿ ಹೊರಬೀಳುತ್ತಿದ್ದಂತೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಗರು ಹೈಕಮಾಂಡ್ ನಿರ್ಧಾರಕ್ಕೆ ಸಿಡಿಮಿಡಿಗೊಂಡಿದ್ಧಾರೆ.
ಈ ಬಗ್ಗೆ ಮಾತನಾಡಿದ ಅಮೃತ್ ಶೆಣೈ, ” ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ವಿರುದ್ದ ಪಕ್ಷದ ಒಳಗೆ ತೀವ್ರ ಪ್ರತಿಭಟನೆ ಸಲ್ಲಿಸುತ್ತೇನೆ ಒಂದು ವೇಳೆ ಪಕ್ಷದ ನಿರ್ಧಾರ ಬದಲಾಗದಿದ್ದರೆ ನಾನು ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕಾಗಿ ನಾನು ಎಐಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದು ಪಕ್ಷದ ನಿಲುವು ಬದಲಾಗದೇ ಇದ್ದರೆ, ನಾನು ಪಕ್ಷೇತರನಾಗಿ ನಾಮ ಪತ್ರ ಸಲ್ಲಿಸುವ ಬಗ್ಗೆಯೂ ಚಿಂತಿಸುತ್ತೇನೆ. ನನಗೆ ಗೆಲುವು ಅಥವಾ ಸೋಲುವುದು ಮುಖ್ಯವಲ್ಲ. ಸಿದ್ದಾಂತದ ಜತೆ ರಾಜಿ ಆಗದಂತೆ ಬದುಕುವುದು ಮುಖ್ಯ” ಎಂದು ಹೇಳಿದ್ದಾರೆ
ನನ್ನ ನಿರ್ಧಾರವನ್ನು ಹಲವು ಕಾಂಗ್ರೆಸ್ ಕಾರ್ಯಕರ್ತರು ಒಪ್ಪದಿರಬಹುದು. ನನ್ನ ನಿರ್ಧಾರ ಒಪ್ಪಲೇಬೇಕೆಂದು ಒತ್ತಾಯ ಇಲ್ಲ. ಈ ಹಿಂದೆ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ನಾನು ಚಿರಋಣಿ. ಬಿಜೆಪಿಯ ಅನ್ಯಾಯವನ್ನು ಮಾತ್ರ ಪ್ರತಿಭಟಿಸಿ ಕಾಂಗ್ರೆಸ್ ಅನ್ಯಾಯಗಳನ್ನು ನುಂಗಿ ಬದುಕಿದರೆ ನನಗೆ ನಾನು ಆತ್ಮ ದ್ರೋಹ ಮಾಡಿದಂತೆ ಆಗುತ್ತದೆ. ಈ ಸನ್ನಿವೇಶ ಉಸಿರುಗಟ್ಟಿದಂತೆ ಇದೆ. ಕಾಂಗ್ರೆಸ್ ನ ಇಂದಿನ ಹೈಕಮಾಂಡ್ ನಿರ್ಧಾರ ಯಾಕೋ ಗಂಟಲಿನ ಕೆಳಗೆ ಇಳಿಯುತ್ತಿಲ್ಲ ಎಂದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…