ಉಡುಪಿ, : ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಶಸ್ವಿಯಾಗಿದ್ದಾರೆ.ನನ್ನ ಮೇಲೆ ವಿಶ್ವಾಸ ಇಟ್ಟು ಅವಕಾಶ ನೀಡಿರುವ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಕೃತಜ್ಞತೆಗಳು. ನಾವೆಲ್ಲ ಒಗ್ಗಟ್ಟಾಗಿ ಬಿಜೆಪಿಯ ರಥ ಎಳೆಯುತ್ತೇವೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕುರಿತು ಇಂದು ಸಂಜೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ಬಿಜೆಪಿಯಿಂದ 300 ಸಂಸದರು ಗೆದ್ದು ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುತ್ತೇವೆ. ಕ್ಷೇತ್ರದ ಜನ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಈ ಬಾರಿ ಸವಾಲಾಗಿ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರೇ ನಮ್ಮ ಸೇನಾನಿಗಳು. ಸೈನಿಕರು ಗಡಿಯಲ್ಲಿ ಯುದ್ದ ಮಾಡಿ ದಂತೆ ನಮ್ಮ ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಮೋದಿಯನ್ನು ಗೆಲ್ಲಿಸಲು ಹಗಲಿರುಳು ದುಡಿಯುತ್ತಾರೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಟಿಕೆಟ್ ಆಕಾಂಕ್ಷೆ ಪಡುವುದು ತಪ್ಪಲ್ಲ. ಟಿಕೆಟ್ ಸಿಕ್ಕಿದ ನಂತರ ಎಲ್ಲರು ಅಭ್ಯರ್ಥಿ ಪರ ದುಡಿಯುತ್ತಾರೆ ಎಂದು ಅವರು ತಿಳಿಸಿದರು.
ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ ..
ಈ ಕುರಿತು ಪ್ರತಿಕ್ರಿಯೆ ನೀಡಿರು ಶೋಭಾ ಕರಂದ್ಲಾಜೆ ಅವರು, ರಾಷ್ಟ್ರ ಮತ್ತು ರಾಜ್ಯ ನಾಯಕರಿಗೆ ನನ್ನ ಧನ್ಯವಾದ. ವಿಶ್ವಾಸವಿಟ್ಟು ಮತ್ತೊಮ್ಮೆ ಅವಕಾಶ ನೀಡಿದ್ದಾರೆ. ನಾವು ಒಗ್ಗಟ್ಟಾಗಿ ಬಿಜೆಪಿ ರಥ ಎಳೆಯುತ್ತೇವೆ. ದೇಶಾದ್ಯಂತ ಬಿಜೆಪಿಯಿಂದ 300 ಸಂಸದರು ಆಯ್ಕೆಯಾಗುತ್ತಾರೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜನ ಆಶೀರ್ವಾದ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಈ ಬಾರಿ ಗೆದ್ದು ಸವಲಾಗಿ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…