Featured

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ; ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ : ಶೋಭಾ ಕರಂದ್ಲಾಜೆ – Vishwanews24

ಉಡುಪಿ, : ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಶಸ್ವಿಯಾಗಿದ್ದಾರೆ.ನನ್ನ ಮೇಲೆ ವಿಶ್ವಾಸ ಇಟ್ಟು ಅವಕಾಶ ನೀಡಿರುವ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಕೃತಜ್ಞತೆಗಳು. ನಾವೆಲ್ಲ ಒಗ್ಗಟ್ಟಾಗಿ ಬಿಜೆಪಿಯ ರಥ ಎಳೆಯುತ್ತೇವೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕುರಿತು ಇಂದು ಸಂಜೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ಬಿಜೆಪಿಯಿಂದ 300 ಸಂಸದರು ಗೆದ್ದು ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುತ್ತೇವೆ. ಕ್ಷೇತ್ರದ ಜನ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಈ ಬಾರಿ ಸವಾಲಾಗಿ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರೇ ನಮ್ಮ ಸೇನಾನಿಗಳು. ಸೈನಿಕರು ಗಡಿಯಲ್ಲಿ ಯುದ್ದ ಮಾಡಿ ದಂತೆ ನಮ್ಮ ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಮೋದಿಯನ್ನು ಗೆಲ್ಲಿಸಲು ಹಗಲಿರುಳು ದುಡಿಯುತ್ತಾರೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಟಿಕೆಟ್ ಆಕಾಂಕ್ಷೆ ಪಡುವುದು ತಪ್ಪಲ್ಲ. ಟಿಕೆಟ್ ಸಿಕ್ಕಿದ ನಂತರ ಎಲ್ಲರು ಅಭ್ಯರ್ಥಿ ಪರ ದುಡಿಯುತ್ತಾರೆ ಎಂದು ಅವರು ತಿಳಿಸಿದರು.

ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ ..

ಈ ಕುರಿತು ಪ್ರತಿಕ್ರಿಯೆ ನೀಡಿರು ಶೋಭಾ ಕರಂದ್ಲಾಜೆ ಅವರು, ರಾಷ್ಟ್ರ ಮತ್ತು ರಾಜ್ಯ ನಾಯಕರಿಗೆ ನನ್ನ ಧನ್ಯವಾದ. ವಿಶ್ವಾಸವಿಟ್ಟು ಮತ್ತೊಮ್ಮೆ ಅವಕಾಶ ನೀಡಿದ್ದಾರೆ. ನಾವು ಒಗ್ಗಟ್ಟಾಗಿ ಬಿಜೆಪಿ ರಥ ಎಳೆಯುತ್ತೇವೆ. ದೇಶಾದ್ಯಂತ ಬಿಜೆಪಿಯಿಂದ 300 ಸಂಸದರು ಆಯ್ಕೆಯಾಗುತ್ತಾರೆ.  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜನ ಆಶೀರ್ವಾದ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಈ ಬಾರಿ ಗೆದ್ದು ಸವಲಾಗಿ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಎಂದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

16 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

16 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

16 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

19 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

19 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago