ಉಡುಪಿ

ಉಡುಪಿ- ಚಿಕ್ಕಮಗಳೂರು ಕ್ಷೇತದಲ್ಲಿ ಬಿಜೆಪಿಯಿಂದ ಪ್ರಮೋದ್ ಮಧ್ವರಾಜ್‌ಗೆ ಟಿಕೆಟ್ ನೀಡಲು ಮೀನುಗಾರ ಸಂಘಟನೆ ಮುಖಂಡರ ಆಗ್ರಹ – vishwanews24

ಉಡುಪಿ- ಚಿಕ್ಕಮಗಳೂರು ಕ್ಷೇತದಲ್ಲಿ ಬಿಜೆಪಿಯಿಂದ ಪ್ರಮೋದ್ ಮಧ್ವರಾಜ್‌ಗೆ ಟಿಕೆಟ್ ನೀಡಲು ಮೀನುಗಾರ ಸಂಘಟನೆ ಮುಖಂಡರ ಆಗ್ರಹ

ಉಡುಪಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಮೀನುಗಾರ ಸಮಾಜದ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಬೇಕು ಎಂದು ವಿವಿಧ ಮೀನುಗಾರ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ.ಸುವರ್ಣ, ರಾಜಕೀಯ ಹಿನ್ನೆಲೆಯಿಂದ ಬಂದಿರುವ ಪ್ರಮೋದ್ ಮಧ್ವರಾಜ್, ಶಾಸಕರಾಗಿ, ಸಚಿವರಾಗಿಯೂ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಭ್ರಷ್ಟಾಚಾರ, ಕಳಂಕ ರಹಿತ ಪರಿಶುದ್ಧ ರಾಜಕಾರಣಿಯಾಗಿ 2018ರ ಅವಧಿ ಯಲ್ಲಿ ಇಡೀ ರಾಜ್ಯದಲ್ಲೇ ನಂ.1 ಶಾಸಕರಾಗಿ ಮೂಡಿಬಂದಿದ್ದರು ಎಂದರು.

ಈಗಿನ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯಮಟ್ಟದ ನಾಯಕಿಯಾಗಿರುವು ದರಿಂದ ಅವರಿಗೆ ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಆದರೆ ಮೀನುಗಾರರಾಗಿ ಪ್ರಮೋದ್ ಮಧ್ವರಾಜ್ ಅವರಿಗೆ ಉಡುಪಿ ಕ್ಷೇತ್ರವೇ ಹೆಚ್ಚು ಸೂಕ್ತವಾಗಿರುವುದರಿಂದ ಅವರಿಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅವರು ತಿಳಿಸಿದರು.

ಮಲ್ಪೆ ಬಂದರು ಸಂಪರ್ಕಿಸುವ ಆದಿಉಡುಪಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗದೆ ನನೆಗುದಿಗೆ ಬಿದ್ದಿದೆ. ಅನೇಕ ವರ್ಷಗಳ ವಿಮಾನ ನಿಲ್ದಾಣದ ಸ್ಥಾಪನೆ ಕೂಡ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಮೀನು ಗಾರರ ಅನೇಕ ಸಮಸ್ಯೆಗಳು ಇನ್ನೂ ಪರಿಹಾರ ಕಂಡಿಲ್ಲ. ಈ ಎಲ್ಲ ಯೋಜನೆ ಅನುಷ್ಠಾನ ಮಾಡಲು ಸಮರ್ಥ ನಾಯಕತ್ವ ಹೊಂದಿರುವ ಪ್ರಮೋದ್ ಮಧ್ವರಾಜ್ ಅವರಿಂದ ಮಾತ್ರ ಸಾಧ್ಯ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮೀನುಗಾರ ಮುಖಂಡರಾದ ಸಾಧು ಸಾಲಿಯನ್, ಜಗನ್ನಾಥ ಕುಂದರ್, ಜಗನ್ನಾಥ ಅಮೀನ್, ಮೋಹನ್ ಕುಂದರ್, ನಾಗರಾಜ್ ಸುವರ್ಣ, ಕೃಷ್ಣ ಸುವರ್ಣ, ಸುಭಾಸ್ ಮೆಂಡನ್, ರವಿರಾಜ್ ಸುವರ್ಣ, ಯೋಗೀಶ್ ಸಾಲ್ಯಾನ್ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

10 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

10 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

11 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

11 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

11 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

11 hours ago