Featured

ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಸ್ಪರ್ಧಿಸಲಿದ್ದಾರ ಪ್ರಮೋದ್ ಮಧ್ವರಾಜ್ ?? Vishwanews24

ಉಡುಪಿ,: ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕಮಗಳೂರು- ಉಡುಪಿ ಕ್ಷೇತ್ರವನ್ನು ಕಾಂಗ್ರೆಸ್​ ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಕ್ಷೇತ್ರದಲ್ಲಿ ಬಿಜೆಪಿ ನಂತರ ಕಾಂಗ್ರೆಸ್​ ನಾಯಕರು ಒಂದಷ್ಟು ವರ್ಚಸ್ಸು ಹೊಂದಿದ್ದರೆ ಬಿಟ್ಟರೆ, ಜೆಡಿಎಸ್​ನಿಂದ ಹೇಳಿಕೊಳ್ಳುವಂತಹ ಪ್ರಬಲ ನಾಯಕರು ಅಲ್ಲಿ ಇಲ್ಲ. ಎಂಎಲ್​ಸಿ ಭೋಜೆಗೌಡ ಒಂದಿಷ್ಟು ಪ್ರಭಾವ ಹೊಂದಿದ್ದು ಸಿಎಂ ಕುಮಾರಸ್ವಾಮಿ ಆಪ್ತರಾಗಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್​ ಒಂದು ಬಾರಿ ಮಾತ್ರ ಗೆದ್ದಿರುವ ಇತಿಹಾಸವಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರಗಳು ಸೀಟು ಹಂಚಿಕೆಯಲ್ಲಿ ಜೆಡಿಎಸ್‌ಗೆ ಬಿಟ್ಟುಕೊಡಲಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕೀಳಿಸುವ ಬಗ್ಗೆ ಮಾತುಕತೆಗಳು ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಇನ್ನಷ್ಟೆ ಹೊರಬರಬೇಕಾಗಿದೆ.

ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಪ್ರಮೋದ್ ಮಧ್ವರಾಜ್‌ರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಪ್ರಮೋದ್ ಕಾಂಗ್ರೆಸ್ ನಾಯಕರ ಅಭಿಪ್ರಾಯಕ್ಕಾಗಿ ಮುಂದೆ ನೋಡುತ್ತಿದ್ದಾರೆ. ಎರಡು ಪಕ್ಷಗಳು ಒಪ್ಪಿದರೆ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವುದು ಖಚಿತ ಎಂಬುದು ಮೂಲಗಳು ತಿಳಿಸಿವೆ.

ಈ ಕುರಿತು ದೂರವಾಣಿ ಮೂಲಕ ಸಂಪರ್ಕಿಸಿ ಪ್ರತಿಕ್ರಿಯಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ. ಇಲ್ಲಿ ಎರಡೂ ಪಕ್ಷ ಜೊತೆಯಾಗಿ ಚುನಾವಣೆಗೆ ಸ್ಪರ್ಧಿಸಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಒಬ್ಬ ಅಭ್ಯರ್ಥಿ ಯನ್ನು ಚುನಾವಣೆಗೆ ನಿಲ್ಲಿಸಲಿದೆ. ಚಿಹ್ನೆ ಮಾತ್ರ ಜೆಡಿಎಸ್ ಆಗಿರುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಆಗಬೇಕೆಂಬುದು ಚರ್ಚೆ ನಡೆಯುತ್ತಿದೆ ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಸ್ಪರ್ಧಿಸುವ ಕುರಿತು ನನ್ನ ಅಭಿಪ್ರಾಯ ಕೇಳಿದ್ದಾರೆ. ನಾನು ಕಾಂಗ್ರೆಸ್ ವರಿಷ್ಠರು, ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ತಿಳಿದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದೇನೆ. ಆ ತೀರ್ಮಾನ ಈವರೆಗೆ ಅಂತಿಮ ಆಗಿಲ್ಲ ಎಂದು ಅವರು ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪಕ್ಷ ಗಟ್ಟಿಯಾಗಿದೆ. ಆದುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಜೊತೆಯಾಗಿ ಇಲ್ಲಿ ಸ್ಪರ್ಧಿಸಿದರೆ ನಾವು ಪ್ರಬಲರಾಗುತ್ತೇವೆ. ಫಲಿತಾಂಶ ಕೊಡುವುದು ಜನರ ಕೈಯಲ್ಲಿದೆ. ಈ ಹಿಂದೆ ಚುನಾವಣೆಗಳು ಕೂಡ ಅದಕ್ಕೆ ಸಾಕ್ಷಿಯಾಗಿವೆ. ಅನಿರೀಕ್ಷಿತ ಫಲಿತಾಂಶ ಕೊಡುವುದೇ ಪ್ರಜಾ ಪ್ರಭುತ್ವದ ವ್ಯವಸ್ಥೆಯ ಪ್ರಮುಖ ಅಂಶ ಆಗಿದೆ ಎಂದು ಅವರು ಹೇಳಿದರು.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago