ಉಡುಪಿ,: ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕಮಗಳೂರು- ಉಡುಪಿ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಕ್ಷೇತ್ರದಲ್ಲಿ ಬಿಜೆಪಿ ನಂತರ ಕಾಂಗ್ರೆಸ್ ನಾಯಕರು ಒಂದಷ್ಟು ವರ್ಚಸ್ಸು ಹೊಂದಿದ್ದರೆ ಬಿಟ್ಟರೆ, ಜೆಡಿಎಸ್ನಿಂದ ಹೇಳಿಕೊಳ್ಳುವಂತಹ ಪ್ರಬಲ ನಾಯಕರು ಅಲ್ಲಿ ಇಲ್ಲ. ಎಂಎಲ್ಸಿ ಭೋಜೆಗೌಡ ಒಂದಿಷ್ಟು ಪ್ರಭಾವ ಹೊಂದಿದ್ದು ಸಿಎಂ ಕುಮಾರಸ್ವಾಮಿ ಆಪ್ತರಾಗಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಒಂದು ಬಾರಿ ಮಾತ್ರ ಗೆದ್ದಿರುವ ಇತಿಹಾಸವಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರಗಳು ಸೀಟು ಹಂಚಿಕೆಯಲ್ಲಿ ಜೆಡಿಎಸ್‌ಗೆ ಬಿಟ್ಟುಕೊಡಲಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕೀಳಿಸುವ ಬಗ್ಗೆ ಮಾತುಕತೆಗಳು ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಇನ್ನಷ್ಟೆ ಹೊರಬರಬೇಕಾಗಿದೆ.
ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಪ್ರಮೋದ್ ಮಧ್ವರಾಜ್‌ರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಪ್ರಮೋದ್ ಕಾಂಗ್ರೆಸ್ ನಾಯಕರ ಅಭಿಪ್ರಾಯಕ್ಕಾಗಿ ಮುಂದೆ ನೋಡುತ್ತಿದ್ದಾರೆ. ಎರಡು ಪಕ್ಷಗಳು ಒಪ್ಪಿದರೆ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವುದು ಖಚಿತ ಎಂಬುದು ಮೂಲಗಳು ತಿಳಿಸಿವೆ.
ಈ ಕುರಿತು ದೂರವಾಣಿ ಮೂಲಕ ಸಂಪರ್ಕಿಸಿ ಪ್ರತಿಕ್ರಿಯಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ. ಇಲ್ಲಿ ಎರಡೂ ಪಕ್ಷ ಜೊತೆಯಾಗಿ ಚುನಾವಣೆಗೆ ಸ್ಪರ್ಧಿಸಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಒಬ್ಬ ಅಭ್ಯರ್ಥಿ ಯನ್ನು ಚುನಾವಣೆಗೆ ನಿಲ್ಲಿಸಲಿದೆ. ಚಿಹ್ನೆ ಮಾತ್ರ ಜೆಡಿಎಸ್ ಆಗಿರುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಆಗಬೇಕೆಂಬುದು ಚರ್ಚೆ ನಡೆಯುತ್ತಿದೆ ಎಂದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಸ್ಪರ್ಧಿಸುವ ಕುರಿತು ನನ್ನ ಅಭಿಪ್ರಾಯ ಕೇಳಿದ್ದಾರೆ. ನಾನು ಕಾಂಗ್ರೆಸ್ ವರಿಷ್ಠರು, ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ತಿಳಿದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದೇನೆ. ಆ ತೀರ್ಮಾನ ಈವರೆಗೆ ಅಂತಿಮ ಆಗಿಲ್ಲ ಎಂದು ಅವರು ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪಕ್ಷ ಗಟ್ಟಿಯಾಗಿದೆ. ಆದುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಜೊತೆಯಾಗಿ ಇಲ್ಲಿ ಸ್ಪರ್ಧಿಸಿದರೆ ನಾವು ಪ್ರಬಲರಾಗುತ್ತೇವೆ. ಫಲಿತಾಂಶ ಕೊಡುವುದು ಜನರ ಕೈಯಲ್ಲಿದೆ. ಈ ಹಿಂದೆ ಚುನಾವಣೆಗಳು ಕೂಡ ಅದಕ್ಕೆ ಸಾಕ್ಷಿಯಾಗಿವೆ. ಅನಿರೀಕ್ಷಿತ ಫಲಿತಾಂಶ ಕೊಡುವುದೇ ಪ್ರಜಾ ಪ್ರಭುತ್ವದ ವ್ಯವಸ್ಥೆಯ ಪ್ರಮುಖ ಅಂಶ ಆಗಿದೆ ಎಂದು ಅವರು ಹೇಳಿದರು.
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…