ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ ; ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ : ಶೋಭಾ ಕರಂದ್ಲಾಂಜೆ – Vishwanews24
ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ ; ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ : ಶೋಭಾ ಕರಂದ್ಲಾಂಜೆ
ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ..
ನಾನು ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಬಯಸಿದರೆ ನಾನು ಅದಕ್ಕೆ ಬದ್ಧನಾಗಿರುತ್ತೇನೆ..
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸುವರ್ಣಾವಕಾಶ ನಮ್ಮ ಮುಂದಿದೆ..
ಉಡುಪಿ : ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ ಎಂದು ಮುಂಬರುವ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಂಜೆ ಹೇಳಿದ್ದಾರೆ.
ಇಂದು ಮುಂದಿನ ಲೋಕಸಭಾ ಕ್ಷೇತ್ರದ ಚುನಾವಣಾ ಕಚೇರಿ ಉದ್ಘಾಟಿಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವೆ ಶೋಭಾ, ”ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ನಾನು ಸಂಪೂರ್ಣ ಹೊಸಬನಾಗಿದ್ದರೂ ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಹಾಗಾಗಿ ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ, ಆದರೆ ಪಕ್ಷವು ನಾನು ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಬಯಸಿದರೆ ನಾನು ಅದಕ್ಕೆ ಬದ್ಧನಾಗಿರುತ್ತೇನೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ, ನಾನು ಪ್ರಚಾರಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದರು.
Karnataka Budget – ಉಡುಪಿ ಸೇರಿದಂತೆ ಪ್ರತಿ ಜಿಲ್ಲೆಯಲ್ಲೂ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ… Vishwanews24
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸುವರ್ಣಾವಕಾಶ ನಮ್ಮ ಮುಂದಿದೆ ಎಂದಿದ್ದಾರೆ.
