Featured

ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ : ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುತ್ತಾರ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ – Vishwanews24

ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸೈದ್ಧಾಂತಿಕ ಹೋರಾಟ ನಡೆಸುವ ಉದ್ದೇಶದಿಂದ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಅಮೃತ್‌ ಶೆಣೈ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ನಿಶ್ಚಲ. ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಅಪೂರ್ಣ ಕಾಮಗಾರಿಯಿಂದ ಅಪಘಾತಕ್ಕೊಳಪಟ್ಟು ಅದೆಷ್ಟೋ ಜನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜೀವ ತೆತ್ತಿದ್ದಾರೆ ,ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದೆಂದ ಅಮೃತ್, ಕಾಫಿ ,ತೆಂಗು, ಅಡಿಕೆ ಬೆಳೆಗಾರರ ಹಾಗೂ ರೈತರ ಸಮಸ್ಯೆ ಗಳ‌ನ್ನು ಪರಿಹರಿಸಲು ಯತ್ನಿಸಲಾಗುವುದು.ಕ್ಷೇತ್ರದಲ್ಲೇ ಉದ್ಯೋಗ ಸೃಷ್ಟಿಗೆ ಯೋಜನೆಗಳು ರೂಪಿಸಿ ಪ್ರಯತ್ನ ಮಾಡಲಾಗುವುದು.ಟೋಲ್ ಗೇಟ್ ಪಾಸ್ ಪೋರ್ಟ್ ಇನ್ನಿತರ ವಿಚಾರಗಳ ಸಕ್ರಿಯ ಹೋರಾಟದ ಭರವಸೆ ನೀಡಿದ್ದಾರೆ.

ಇವೆಲ್ಲಾ ಅಭಿವೃದ್ಧಿ ಪರ ಕಾರ್ಯದ ಹೊರತು ಪಡಿಸಿ ಸಾಮಾಜಿಕ ಸಾಮರಸ್ಯ ,ಸಹೋದರತೆ, ಐಕ್ಯತೆಗಾಗಿ ಪ್ರಾಮಾಣಿಕ ಯತ್ನ, ಇದನ್ನು ಹಾಳು ಮಾಡಲು ಬಯಸುವ ಶಕ್ತಿಗಳ‌ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ.

ಅಮೃತ್ ಶೆಣೈ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದು, ಉಡುಪಿಯಲ್ಲಿ ಅಸ್ತಿತ್ವ ಇಲ್ಲದ ಜೆ.ಡಿ.ಎಸ್ ಅಭ್ಯರ್ಥಿಗೆ ಬಿಟ್ಟು ಕೊಟ್ಟ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದರು. ಈಗಾಗಲೇ ಇವರ ಅಭಿಮಾನಿ ಬಳಗದ ಸಹಾಯದಿಂದ ಮತ ಕಣಕ್ಕಿಳಿದಿದ್ದು ಈ ಬಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ, ಜೆ.ಡಿ.ಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ರವರನ್ನು ಎದುರಿಸಲಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago