ಉಡುಪಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಅಂತಿಮವಾಗಿ 12 ಅಭ್ಯರ್ಥಿಗಳು ಸ್ಪರ್ಧೆ – Vishwanews24

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಂತಿಮವಾಗಿ 12 ಅಭ್ಯರ್ಥಿಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆಂದು ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ತಿಳಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 14,98,016 ಮತದಾರರಿದ್ದು ಅದರಲ್ಲಿ ಮಹಿಳೆಯರು 7,65,823 ಮತ್ತು ಪುರುಷರು 7,32,193. ಯುವ ಮತದಾರರ ಸಂಖ್ಯೆ 30,826 ಇದೆ. 11,861 ಮತದಾರ ವಿಕಲಚೇತನರಾಗಿದ್ದಾರೆಂದು ಹೆಫ್ಸಿಬಾ ಮಾಹಿತಿ ನೀಡಿದ್ದಾರೆ.

ಮಹಿಳೆಯರ ವಿಶೇಷ ಮತದಾನ ಕೇಂದ್ರವಾಗಿ 26 ಸಖಿ ಮತದಾನ ಕೇಂದ್ರ ಸ್ಥಾಪಿಸಲಾಗಿದೆ.

ಎರಡು ಕ್ಷೇತ್ರದಲ್ಲಿ 1837 ಮತದಾನ ಕೇಂದ್ರ ಸ್ಥಾಪಿಸಲಿದ್ದು, ಉಡುಪಿಯಲ್ಲಿ 1,111 ಮತದಾನ ಕೇಂದ್ರವಿರಲಿದೆ. ಸುಮಾರು 5616 ಸಿಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ.

ಆಯೋಗದಿಂದ ಅನುಮೋದನೆಗೊಂಡ ಬಳಿಕ ಬ್ಯಾಲೆಟ್‌ ಯುನಿಟ್‌ಗೆ ಅಳವಡಿಸುವ ಹಾಗೂ ಟೆಂಡರ್ ಮತಕ್ಕೆ ಅಗತ್ಯವಿರುವ ಮತಪತ್ರಗಳನ್ನು ಸರ್ಕಾರಿ ಮುದ್ರಣಾಲಯದಲ್ಲಿ ಮುದ್ರಿಸಲಾಗುತ್ತದೆ. ಸೇವಾ ಮತದಾರರಿಗೆ ಅಂಚೆ ಮತಪತ್ರವನ್ನು ಇಟಿಬಿಪಿಎಸ್ ತಂತ್ರಾಂಶದ ಮೂಲಕ ಕಳುಹಿಸಲಾಗುವುದು ಎಂದರು.

ಲೋಕಸಭಾ ಕ್ಷೇತ್ರದಲ್ಲಿ 548 ಪುರುಷ ಹಾಗೂ 7 ಮಹಿಳಾ ಸೇವಾ ಮತದಾರರಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಂಚೆಮತಪತ್ರವನ್ನು ಮುದ್ರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಶೇ 99.9ರಷ್ಟು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿದೆ.

ಪಿ.ಪರಮೇಶ್ವರ್ (ಬಿಎಸ್ಪಿ),

ಪ್ರಮೋದ್ ಮಧ್ವರಾಜ್ (ಜೆಡಿ (ಎಸ್),

ಶೋಭಾ ಕರಂದ್ಲಾಜೆ (ಬಿಜೆಪಿ),

ಪಿ ಗೌತಮ್ ಪ್ರಭು (ಶಿವ ಸೇನೆ),

ಎಂ.ಕೆ ದಯಾನಂದ (ಪ್ರೌಟಿಸ್ಟ್ ಸರ್ವಾ ಸಮಾಜ),

ವಿಜಯಕುಮಾರ್ (ಸಿಪಿಐ- ಎಂಎಲ್ ರೆಡ್ಸ್ಟಾರ್),

ಸುರೇಶ್ ಕುಂದರ್ (ಉತ್ತರ ಪ್ರಜಾಕೀಯ ಪಕ್ಷದ ),

ಶೇಖರ್ ಹವಾನ್ಜೆ (ಆರ್ಪಿಐ)

ಮತ್ತು ಸ್ವತಂತ್ರ ಅಭ್ಯರ್ಥಿಗಳಾದ

ಅಬ್ದುಲ್ ರಹಮಾನ್,

ಅಮೃತ್ ಶೆಣೈ,

ಎಂ.ಕೆ. ಗಣೇಶ್

ಕೆ.ಸಿ. ಪ್ರಕಾಶ್

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago