Featured

ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಈ ಬಾರಿ ಜೆಡಿಎಸ್‌ ಪಕ್ಷದ ಅಭ್ಯರ್ಥಿ ಗೆದ್ದರೆ ಇತಿಹಾಸ ನಿರ್ಮಾಣ..!! – Vishwanews24

ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ಜೆಡಿಎಸ್‌ ಪಕ್ಷದ ಅಭ್ಯರ್ಥಿ ಜಯಗಳಿಸಿಲ್ಲ. ಈ ಬಾರಿ ಗೆದ್ದರೆ ಇತಿಹಾಸ ನಿರ್ಮಾಣವಾಗಲಿದೆ.

1989ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಸಂಜೀವಪ್ಪ ಸ್ಪರ್ಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆಸ್ಕರ್ ಫರ್ನಾಂಡೀಸ್ (3,13,849) ವಿರುದ್ಧ  ಜನತಾದಳದ ಸಂಜೀವಪ್ಪ (1,61,656) ಸೋಲು ಕಂಡಿದ್ದರು.

ಬಳಿಕ 1991ರ ಚುನಾವಣೆಯಲ್ಲಿ ಜನತಾದಳದಿಂದ ಯು.ಆರ್.ಸಭಾಪತಿ 1,04,071 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದರು. 1996ರ ಚುನಾವಣೆಯಲ್ಲೂ ಜನತಾದಳದ ವಸಂತ ಬಂಗೇರ 1,47,293 ಮತ ಪಡೆದು ಸೋಲು ಅನುಭವಿಸಿದ್ದರು.

1998ರ ಚುನಾವಣೆಯಲ್ಲಿ ಬಿಜೆಪಿಯ ಐಎಂ ಜಯರಾಮಶೆಟ್ಟಿ (3,41,466) ಅವರ ವಿರುದ್ಧ ಮಟ್ಟಾರು (29,238) ಸೋತು ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.

1999ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಶ್ರೀನಿವಾಸ (11,816) ಹೀನಾಯವಾಗಿ ಸೋತರು. 2004ರಲ್ಲಿ ತಾರಾನಾಥ್ ಶೆಟ್ಟಿ (45574), 2014ರಲ್ಲಿ ಧನಂಜಯ ಕುಮಾರ್ (14895) ಕೂಡ ಪರಾಭವಗೊಂಡರು. 2009ರಲ್ಲಿ ಜೆಡಿಎಸ್‌ ಅಭ್ಯರ್ಥಿಯೇ ಇರಲಿಲ್ಲ.

ಹೀಗೆ ಉಡುಪಿಯಲ್ಲಿ ನಡೆದ ಎಲ್ಲ ಲೋಕಸಭಾ ಚುನಾವಣೆಗಳಲ್ಲೂ ಜೆಡಿಎಸ್‌ ಕಳಪೆ ಪ್ರದರ್ಶನ ನೀಡಿದೆ. ಆದರೆ, ಈ ಬಾರಿ ಗೆಲ್ಲುವ ವಿಶ್ವಾಸದಲ್ಲಿ ಕಣಕ್ಕಿಳಿದಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಸ್ಪರ್ಧಿಸಿದ್ದಾರೆ. ಮತ್ತೊಂದೆಡೆ ಹಾಲಿ ಸಂಸದೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಎದುರಾಳಿಯಾಗಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago