ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಜಯಗಳಿಸಿಲ್ಲ. ಈ ಬಾರಿ ಗೆದ್ದರೆ ಇತಿಹಾಸ ನಿರ್ಮಾಣವಾಗಲಿದೆ.
1989ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಸಂಜೀವಪ್ಪ ಸ್ಪರ್ಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆಸ್ಕರ್ ಫರ್ನಾಂಡೀಸ್ (3,13,849) ವಿರುದ್ಧ ಜನತಾದಳದ ಸಂಜೀವಪ್ಪ (1,61,656) ಸೋಲು ಕಂಡಿದ್ದರು.
ಬಳಿಕ 1991ರ ಚುನಾವಣೆಯಲ್ಲಿ ಜನತಾದಳದಿಂದ ಯು.ಆರ್.ಸಭಾಪತಿ 1,04,071 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದರು. 1996ರ ಚುನಾವಣೆಯಲ್ಲೂ ಜನತಾದಳದ ವಸಂತ ಬಂಗೇರ 1,47,293 ಮತ ಪಡೆದು ಸೋಲು ಅನುಭವಿಸಿದ್ದರು.
1998ರ ಚುನಾವಣೆಯಲ್ಲಿ ಬಿಜೆಪಿಯ ಐಎಂ ಜಯರಾಮಶೆಟ್ಟಿ (3,41,466) ಅವರ ವಿರುದ್ಧ ಮಟ್ಟಾರು (29,238) ಸೋತು ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.
1999ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಶ್ರೀನಿವಾಸ (11,816) ಹೀನಾಯವಾಗಿ ಸೋತರು. 2004ರಲ್ಲಿ ತಾರಾನಾಥ್ ಶೆಟ್ಟಿ (45574), 2014ರಲ್ಲಿ ಧನಂಜಯ ಕುಮಾರ್ (14895) ಕೂಡ ಪರಾಭವಗೊಂಡರು. 2009ರಲ್ಲಿ ಜೆಡಿಎಸ್ ಅಭ್ಯರ್ಥಿಯೇ ಇರಲಿಲ್ಲ.
ಹೀಗೆ ಉಡುಪಿಯಲ್ಲಿ ನಡೆದ ಎಲ್ಲ ಲೋಕಸಭಾ ಚುನಾವಣೆಗಳಲ್ಲೂ ಜೆಡಿಎಸ್ ಕಳಪೆ ಪ್ರದರ್ಶನ ನೀಡಿದೆ. ಆದರೆ, ಈ ಬಾರಿ ಗೆಲ್ಲುವ ವಿಶ್ವಾಸದಲ್ಲಿ ಕಣಕ್ಕಿಳಿದಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಸ್ಪರ್ಧಿಸಿದ್ದಾರೆ. ಮತ್ತೊಂದೆಡೆ ಹಾಲಿ ಸಂಸದೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಎದುರಾಳಿಯಾಗಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…