Featured

ಉಡುಪಿ : ಚಿತ್ರಮಂದಿರ, ಜಿಮ್, ಈಜುಕೊಳಗಳಲ್ಲಿ ಶೇ. 100 ರಷ್ಟು ಆಸನ ಭರ್ತಿಗೆ ಅವಕಾಶ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಉಡುಪಿ : ಚಿತ್ರಮಂದಿರ, ಜಿಮ್, ಈಜುಕೊಳಗಳಲ್ಲಿ ಶೇ. 100 ರಷ್ಟು ಆಸನ ಭರ್ತಿಗೆ ಅವಕಾಶ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಉಡುಪಿ : ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಲಾದ ಹೆಚ್ಚುವರಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ಜಿಲ್ಲೆಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ, ಹೊರಡಿಸಲಾದ ಆದೇಶದಲ್ಲಿ ಮಾರ್ಪಾಡು ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

ಸಿನಿಮಾ ಹಾಲ್, ಮಲ್ಟಿಫ್ಲೆಕ್ಸ್, ಥಿಯೇಟರ್, ರಂಗಮoದಿರ, ಆಡಿಟೋರಿಯಂ, ಜಿಮ್ ಮತ್ತು ಯೋಗ ಕೇಂದ್ರ ಹಾಗೂ ಈಜುಕೊಳಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ. 100 ಸಾಮರ್ಥ್ಯದೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಕಾರ್ಯಾಚರಿಸಲು ಅನುಮತಿ ನೀಡಲಾಗಿದ್ದು, ನಿಗಧಿತ ಆಸನ ಸಾಮರ್ಥ್ಯವನ್ನು ಮೀರಿರಬಾರದು. ಎರಡು ಡೋಸ್ ಲಸಿಕೆ ಪ್ರಮಾಣ ಪತ್ರ ಹೊಂದಿರುವ, ರೋಗ ಲಕ್ಷಣರಹಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಪ್ರವೇಶ ಸಮಯದಲ್ಲಿ ಥರ್ಮಲ್ ಸ್ಕ್ಯಾನ್ ಬಳಸಿ ಜ್ವರ ಲಕ್ಷಣಗಳ ಕುರಿತು ತಪಾಸಣೆ ನಡೆಸುವುದು ಮತ್ತು ಹ್ಯಾಂಡ್ ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿರುತ್ತದೆ.

ಸಿನಿಮಾ ಹಾಲ್, ಮಲ್ಟಿಫ್ಲೆಕ್ಸ್, ಥಿಯೇಟರ್, ರಂಗಮoದಿರ, ಆಡಿಟೋರಿಯಂಗಳಲ್ಲಿ ಸಾರ್ವಜನಿಕರು ಪ್ರದರ್ಶನ ಸಮಯ ಸೇರಿದಂತೆ ಎಲ್ಲಾ ಸಮಯದಲ್ಲಿಯೂ ಕಡ್ಡಾಯವಾಗಿ ಮಾಸ್ಕ್ ಧರಿಸಿರುವ ಕುರಿತು ಸಂಘಟಕರು ಮೇಲ್ವಿಚಾರಣೆ ನಡೆಸಬೇಕು. ಪ್ರತಿ ಪ್ರದರ್ಶನದ ನಂತರ ಸಭಾಂಗಣ ಮತ್ತು ವಿಶ್ರಾಂತಿ ಕೊಠಡಿಗಳನ್ನು ಸ್ವಚ್ಛಗೊಳಿಸುವುದು ಕಡ್ಡಾಯವಾಗಿರುತ್ತದೆ. ಸಿ.ಪಿ.ಡಬ್ಲೂö್ಯ.ಡಿ ಮಾರ್ಗಸೂಚಿಗಳ ಪ್ರಕಾರ ಎ.ಸಿ ನಿರ್ವಹಿಸಬೇಕು. ಮೇಲ್ಕಂಡ ಸ್ಥಳಗಳ ಒಳಗೆ ಉಪಾಹಾರ, ಆಹಾರ ಮತ್ತು ಪಾನೀಯಗಳ ಸೇವನೆಯನ್ನು ನಿಷೇಧಿಸಲಾಗಿರುತ್ತದೆ.

ಜಿಮ್ ಮತ್ತು ಯೋಗಕೇಂದ್ರಗಳು ಚಟುವಟಿಕೆಯನ್ನು ಹೊರಾಂಗಣದಲ್ಲಿ ಮತ್ತು ತೆರೆದ ಸ್ಥಳದಲ್ಲಿ ಇತರರಿಂದ ಯಾವುದೇ ದೂರುಗಳಿಲ್ಲದೆ ನಡೆಸಬೇಕು. 2 ಮೀಟರ್ ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಪ್ರತಿ ಸೆಷನ್ ಅಥವಾ ಬ್ಯಾಚ್‌ನ ನಂತರ ಸಭಾಂಗಣ ಮತ್ತು ವಿಶ್ರಾಂತಿ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು. ಸಿ.ಪಿ.ಡಬ್ಲೂö್ಯ.ಡಿ ಮಾರ್ಗಸೂಚಿಗಳ ಪ್ರಕಾರ ಎ.ಸಿ ನಿರ್ವಹಿಸಬೇಕು.

ಈಜುಕೊಳಗಳಲ್ಲಿ 2 ಮೀಟರ್ ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಪ್ರತಿ ಸೆಷನ್/ ಬ್ಯಾಚ್‌ನ ನಂತರ ಈಜುಗಾರರು ಉಪಯೋಗಿಸಿರುವ ಬದಲಾವಣೆ ಕೊಠಡಿ / ವಿಶ್ರಾಂತಿ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.

ಮೇಲಿನ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ಡಿಸಾಸ್ಟರ್ ಮ್ಯಾನೆಜ್‌ಮೆಂಟ್ ಆಕ್ಟ್ 2005, ಕರ್ನಾಟಕ ಎಪಿಡೆಮಿಕ್ ಡಿಸಾಸ್ಟರ್ ಆಕ್ಟ್ 2020 ಮತ್ತು ಐ.ಪಿ.ಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago