Featured

ಉಡುಪಿ – ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಐವರ ವಿರುದ್ಧ ಪ್ರಕರಣ ದಾಖಲು – Vishwanews24

ಉಡುಪಿ, : ಕಳೆದ ರವಿವಾರ ನಗರದ ಕಲ್ಸಂಕ ಬಳಿಯ ರಾಯಲ್ ಗಾರ್ಡನ್ಸ್‌ನಲ್ಲಿ ಸಹಬಾಳ್ವೆ ಉಡುಪಿ ನೇತೃತ್ವದಲ್ಲಿ ನಡೆದ ಸರ್ವಜನೋತ್ಸವದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಕ್ಕಾಗಿ ಸಹಬಾಳ್ವೆಯ ಅಧ್ಯಕ್ಷ ಅಮೃತ ಶೆಣೈ ಸೇರಿದಂತೆ ಐವರು ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್-2ರ ಅಧಿಕಾರಿ ಕೆ.ವಿ.ನಾಗರಾಜ್ ಅವರು ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ್ ಶೆಣೈ, ಹಿರಿಯ ಪತ್ರಕರ್ತ ಹಾಗೂ ಚಿಂತಕ ದಿನೇಶ್ ಅಮೀನ್ ಮಟ್ಟು, ದಲಿತ ಮುಖಂಡ ಇಂದೂಧರ ಹೊನ್ನಾಪುರ, ರಾಜ್ಯ ಸಿಪಿಎಂನ ಪ್ರಧಾನ ಕಾರ್ಯದರ್ಶಿ ಜಿ.ಎನ್. ನಾಗರಾಜ್ ಹಾಗೂ ಸಾಮಾಜಿಕ ಚಿಂತಕ ಮಹೇಂದ್ರ ಕುಮಾರ್ ಇವರ ವಿರುದ್ಧ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಅಮೃತ ಶೆಣೈ ನೇತೃತ್ವದಲ್ಲಿ ಮಾ. 17ರಂದು ರಾಯಲ್ ಗಾರ್ಡನ್ ಮೈದಾನದಲ್ಲಿ ನಡೆದ ಸಹಬಾಳ್ವೆ ಸಭೆಯಲ್ಲಿ ದಿನೇಶ್ ಅಮೀನ್ ಮಟ್ಟು, ಮಹೇಂದ್ರ ಕುಮಾರ್, ಜಿ.ಎನ್.ನಾಗರಾಜ್, ಇಂದೂಧರ ಹೊನ್ನಾಪುರ ಇವರು ತಮ್ಮ ಭಾಷಣದಲ್ಲಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಹಾಗೂ ಮತದಾರರ ಮೇಲೆ ಪ್ರಭಾವ ಬೀರುವಂತೆ ಮುಂಬರುವ ಚುನಾವಣೆಯಲ್ಲಿ ಮತದಾರರು ಯೋಚಿಸಿ ಮತ ಚಲಾಯಿಸುವಂತೆ ಕರೆ ನೀಡಿದ್ದಲ್ಲದೇ, ಕಾರ್ಯಕ್ರಮಕ್ಕೆ ಅನುಮತಿ ಪಡೆದ ಅಮೃತ ಶೆಣೈ ಇವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದಾಗಿ ನಾಗರಾಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ನಗರ ಠಾಣೆಯಲ್ಲಿ ಕಲಂ:153ಎ, 295ಎ ಐಪಿಸಿ ಹಾಗೂ 125 ಆರ್.ಪಿ.ಆಕ್ಟ್ 1951ರಂತೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago